Actor Darshan Case | ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ದಿಕ್ಕೆಟ್ಟ ರೇಣುಕಾಸ್ವಾಮಿ ಪೋಷಕರು: ಕಠಿಣ ಶಿಕ್ಷೆಗೆ ಮನವಿ
x

Actor Darshan Case | ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ದಿಕ್ಕೆಟ್ಟ ರೇಣುಕಾಸ್ವಾಮಿ ಪೋಷಕರು: ಕಠಿಣ ಶಿಕ್ಷೆಗೆ ಮನವಿ

ತಮಗೆ ಆಸರೆಯಾಗಿದ್ದ ಮಗನನ್ನು ಕಳೆದುಕೊಂಡು ಈಗ ಜೀವನ ನಡೆಸುವುದು ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ತಮ್ಮ ಮಗಳಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವಂತೆ ರೇಣುಕಾ ಸ್ವಾಮಿ ಪೋಷಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ


ಚಿತ್ರನಟ ದರ್ಶನ್‌ ತೂಗುದೀಪ್‌ ಮತ್ತು ತಂಡದಿಂದ ಕೊಲೆಗೀಡಾದ ಆತನ ಅಭಿಮಾನಿ ರೇಣುಕಾ ಸ್ವಾಮಿಯ ಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಅವರ ನಿವಾಸದಲ್ಲಿ ಭೇಟಿಯಾಗಿ ತಮ್ಮ ಪುತ್ರನ ಕುಟುಂಬಕ್ಕಾಗಿರುವ ಅನ್ಯಾಯದ ಅಳಲು ತೋಡಿಕೊಂಡಿದ್ದಾರೆ.

ರೇಣುಕಾಸ್ವಾಮಿ ತಂದೆ , ತಾಯಿಯರಾದ ಚಿತ್ರದುರ್ಗದ ವಿಆರ್​​ಎಸ್ ಲೇಔಟ್ ನಿವಾಸಿ. ಹಾಗೂ ಸ್ಕಾಂ ನಿವೃತ್ತ ನೌಕರ ಕಾಶೀನಾಥ ಶಿವನಗೌಡ, ಮತ್ತು ರತ್ನಪ್ರಭಾ ಇಂದು ಕಾವೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮಕೊಲೆ ಆರೋಪಿ ದರ್ಶನ್‌ಗೆ ಕಠಿಣ ಶಿಕ್ಷೆಯಾಗಬೇಕೆಂದು ಕೇಳಿಕೊಂಡರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಕಾನೂನು ಪ್ರಕಾರ ಕಠಿಣ ಕ್ರಮಕೈಗೊಳ್ಳಲು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರೆನ್ನಲಾಗಿದೆ.

ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಸರ್ಕಾರ ಯಾವುದೇ ಕಾರಣಕ್ಕೆ ಕೊಲೆ ಆರೋಪಿಗಳಿಗೆ ರಿಯಾಯಿತಿ ನೀಡುವುದಿಲ್ಲ ಎಂದರಲ್ಲದೆ ಇದುವರೆಗೆ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದರೆನ್ನಲಾಗಿದೆ. ಪೊಲೀಸ್‌ ತನಿಖೆ ಬಗ್ಗೆ ಈ ಸಂದರ್ಭದಲ್ಲಿ ರೇಣುಕಾ ಸ್ವಾಮಿ ಪೋಷಕರು ಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯದ ಮೂಲಗಳು ತಿಳಿಸಿವೆ.

ಇದೇ ಸಂದರ್ಭದಲ್ಲಿ ತಮಗೆ ಆಸರೆಯಾಗಿದ್ದ ಮಗನನ್ನು ಕಳೆದುಕೊಂಡು ಈಗ ಜೀವನ ನಡೆಸುವುದು ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ತಮ್ಮ ಮಗಳಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವಂತೆ ರೇಣುಕಾ ಸ್ವಾಮಿ ಪೋಷಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ .

ಹಿನ್ನೆಲೆ

ರೇಣುಕಾ ಸ್ವಾಮಿ ಪತ್ನಿ ಸಹನಾ ಅವರು ಗರ್ಭಿಣಿಯಾಗಿದ್ದಾರೆ. ರೇಣುಕಾ ಸ್ವಾಮಿ ಅಪಹರಣವಾದ ದಿನ ಅಂದರೆ . ಜೂನ್‌ 8 ರಂದು ಬಾಲ್ಯದ ಸ್ನೇಹಿತರು ಬಂದಿದ್ದಾರೆ ಎಂದು ಮನೆಯಲ್ಲಿ ಹೇಳಿ ಹೋಗಿದ್ದ. ರೇಣುಕಾಸ್ವಾಮಿ ನಟ ದರ್ಶನ್ ರ ಅಪ್ಪಟ ಅಭಿಮಾನಿಯಾಗಿದ್ದು ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ಆತ ದರ್ಶನ್‌ ಪ್ರೇಯಸಿ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎನ್ನುವ ಕಾರಣಕ್ಕೆ ದರ್ಶನ್‌ ಮತ್ತು ತಂಡ ಆತನ ಕೊಲೆ ನಡೆಸಿದೆ ಎಂಬುದು ಪೊಲೀಸ್‌ ತನಿಖೆಯಿಂದ ತಿಳಿದುಬಂದಿದೆ.

Read More
Next Story