ಕಾಲ್ತುಳಿತ: ಮೃತರ ಕುಟುಂಬಗಳಿಗೆ ಪರಿಹಾರ ಮೊತ್ತ 25 ಲಕ್ಷಕ್ಕೆ ಏರಿಕೆ

ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಭೀಕರ ಕಾಲ್ತುಳಿತ ಘಟನೆಯಲ್ಲಿ ಮೃತರಾದವರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ.

ಈ ಮೊದಲು ತಲಾ ಹತ್ತು ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿತ್ತು.

ಮೃತರ ಕುಟುಂಬಗಳಿಗೆ ಪರಿಹಾರ ಧನ ಹೆಚ್ಚಳ ಮಾಡುವಂತೆ ಪ್ರತಿಪಕ್ಷಗಳು ಆಗ್ರಹಿಸಿದ್ದವು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಹಾರ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದಾರೆ.

Update: 2025-06-07 16:15 GMT

Linked news