ಬೆಳಗಾವಿಯಲ್ಲಿ ಕಂಡೆಕ್ಟರ್ ಮೇಲೆ ನಡೆದ ಹಲ್ಲೆ ಖಂಡಿಸಿ... ... Bengaluru Bandh | ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಬೆಳಗಾವಿ, ಬೆಂಗಳೂರು, ಮೈಸೂರಿನಲ್ಲಿ ಪ್ರತಿಭಟನೆ
ಬೆಳಗಾವಿಯಲ್ಲಿ ಕಂಡೆಕ್ಟರ್ ಮೇಲೆ ನಡೆದ ಹಲ್ಲೆ ಖಂಡಿಸಿ ಕೆರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜಾಜಿನಗರ ಮೆಟ್ರೊ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡಪರ ಸಂಘಟನೆಗಳ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದರು. ಮರಾಠಿಗರು, ಎಂಇಎಸ್ ಸಂಘಟನೆಯ ಕುರಿತು ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮೆಜೆಸ್ಟಿಕ್, ಬಸವೇಶ್ವರನಗರ, ಕೆ.ಆರ್.ಪುರ, ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಮಾಡುತ್ತಿರುವ ಕನ್ನಡಪರ ಹೋರಾಟಗಾರರನ್ನು ಪೊಲೀಸರು ಬಂಧನ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಪ್ರತಿಭಟನೆ ಹತ್ತಿಕ್ಕುತ್ತಿರುವುದು ಸರಿಯಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಂದ್‌ಗೆ ಅವಕಾಶ ನೀಡುತ್ತಿಲ್ಲ ಎಂದು ಹೋರಾಟಗಾರರು ಆರೋಪಿಸಿದರು.
Update: 2025-03-22 06:49 GMT