ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕ ಅಂಗೀಕಾರ

ಗಿಗ್‌ ಕಾರ್ಮಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ʼಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕಕ್ಕೆʼ ಮಂಗಳವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು. 

ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ವಿಧೇಯಕದ ಕುರಿತು, ಪ್ರಮುಖ ಅಂಶಗಳು, ಮಂಡಳಿ ರಚನೆ, ಸೆಸ್‌ ಸಂಗ್ರಹ, ಕಾರ್ಮಿಕರಿಗೆ ಸಿಗುವ ಸಾಮಾಜಿಕ ಸೇವಾ ಸೌಲಭ್ಯಗಳು ಮತ್ತಿತರ ಅಂಶಗಳನ್ನು ಸದನದ ಗಮನಕ್ಕೆ ತಂದರು. 

ಈ ವಿಧೇಯಕವನ್ನು ಪ್ರತಿಪಕ್ಷ ಹಾಗೂ ಆಡಳಿತ ಪಕ್ಷದ ಸದಸ್ಯರು ಸ್ವಾಗತಿಸಿದರು.

 

 

 

Update: 2025-08-19 11:01 GMT

Linked news