ದಲಿತರ ಬಗ್ಗೆ ಬಿಜೆಪಿ ಮೊಸಳೆ ಕಣ್ಣೀರು: ಸಿಎಂ ಸಿದ್ದರಾಮಯ್ಯ

ದೇಶದಲ್ಲೇ ಮೊದಲ ಬಾರಿಗೆ ಎಸ್‌ಸಿಸಿಪಿ ಹಾಗೂ ಟಿಎಸ್‌ಪಿ ಕಾಯ್ದೆ ಮಾಡಿದ್ದು ಕಾಂಗ್ರೆಸ್‌ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಆದರೆ ಬಿಜೆಪಿಯವರು ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಾರೆ. ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಹಣ ತೆಗೆದಿಡಬೇಕು ಎಂದು ಕಾಯ್ದೆ ಮಾಡಿದ್ದೇವೆ. ಬಿಜೆಪಿ ಅಧಿಕಾರದಲ್ಲಿರುವ ಯಾವುದಾದರೂ ರಾಜ್ಯದಲ್ಲಿ ಈ ಕಾಯ್ದೆ ಮಾಡಿದ್ದಾರೆಯೇ ಎಂದು ಪ್ರತಿಪಕ್ಷಗಳನ್ನು ಪ್ರಶ್ನಿಸಿದ ಅವರು, 2025-26ನೇ ಆರ್ಥಿಕ ಸಾಲಿನಲ್ಲಿ 42,017 ಕೋಟಿ ರೂ. ಹಣ ನಿಗದಿಪಡಿಸಲಾಗಿದೆ ಎಂದರು.

 

Update: 2025-08-22 12:17 GMT

Linked news