ಎಲ್ಲಾ ಶಾಸಕರಿಗೂ ಅನುದಾನ ಗ್ಯಾರಂಟಿ: ಸಿಎಂ ಭರವಸೆ
ರಾಜ್ಯದ 224 ಕ್ಷೇತ್ರದ ಶಾಸಕರಿಗೂ ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಶಾಸಕರಿಗೆ ಭರವಸೆ ನೀಡಿದರು.
ಶುಕ್ರವಾರ ಸದನದಲ್ಲಿ ರಾಜ್ಯದ ಅಭಿವೃದ್ಧಿ ಕುರಿತು ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಗೂ ಅನುದಾನ ನೀಡುತ್ತೇನೆ. ಆದರೆ ಎಷ್ಟು ನೀಡುತ್ತೇನೆ ಎಂದು ಹೇಳುವುದಿಲ್ಲ ಎಂದರು. ಗ್ಯಾರಂಟಿಗಳನ್ನು ನೀಡುವುದರಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಕುಂಠಿತವಾಗಿಲ್ಲ ಎಂದು ಸದನದಲ್ಲಿ ಸಿಎಂ ಸ್ಪಷ್ಟನೆ ನೀಡಿದರು.
Update: 2025-08-22 12:29 GMT