ಉಡುಪಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನ ಸುಹಾಸ್‌... ... Coastal Tension | ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಅಲ್ಲಲ್ಲಿ ಚೂರಿ ಇರಿತ, ಕಲ್ಲು ತೂರಾಟ, ಸಮಗ್ರ ತನಿಖೆಗೆ ಮುಖ್ಯಮಂತ್ರಿ ಸೂಚನೆ

ಉಡುಪಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನ

ಸುಹಾಸ್‌ ಶೆಟ್ಟಿಯ ಹತ್ಯೆಗೆ ಪ್ರತಿಕಾರಕ್ಕಾಗಿ ಉಡುಪಿಯಲ್ಲಿ ಮುಸ್ಲಿಂ ಯುವಕನ ಹತ್ಯೆಗೆ ಯತ್ನ ನಡೆದಿದೆ. ಉಡುಪಿ ತಾಲೂಕಿನ ಅತ್ರಾಡಿಯಲ್ಲಿ ಮುಸ್ಲಿಂ ಆಟೋ ಚಾಲಕ ಅಬೂಬಕ್ಕರ್ ಎಂಬುವರ ಮೇಲೆ ದಾಳಿಯಾಗಿದೆ. ಆಟೋ ಅಡ್ಡಗಟ್ಟಿ ಚಾಲಕ ಅಬೂಬಕ್ಕರ್ ಕೊಲೆಗೆ ಯತ್ನಿಸಲಾಗಿದೆ. ಇನ್ನು ದಾಳಿಗೆ ಯತ್ನಿಸಿದವರನ್ನು ಸುಶಾಂತ್, ಸಂದೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ಅಬೂಬಕ್ಕರ್ ನನ್ನು ಅಡ್ಡಗಟ್ಟಿ ಸುಶಾಂತ್, ಸಂದೇಶ್ ಪೂಜಾರಿ ಎಂಬುವರು ಕೊಲೆಗೆ ಯತ್ನಿಸಿದ್ದಾರೆ ಕೂಡಲೇ ಹಿರಿಯಡ್ಕ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.  

Update: 2025-05-02 06:18 GMT

Linked news