ದಸರಾ ವೇದಿಕೆಯಲ್ಲಿ ಸಿಟ್ಟಿಗೆದ್ದ ಸಿದ್ದರಾಮಯ್ಯ
ನಾಡಹಬ್ಬ ದಸರಾಗೆ ಸೋಮವಾರ ಹಿರಿಯ ಸಾಹಿತಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿ.ಎಂ ಸಿದ್ದರಾಮಯ್ಯ ವೇದಿಕೆಯಲ್ಲೇ ಮುನಿಸಿಕೊಂಡಿದ್ದಾರೆ.
ಸಿ.ಎಂ ಭಾಷಣದ ವೇಳೆ ದಸರಾ ಕಾರ್ಯಕ್ರಮದಿಂದ ಎದ್ದು ಹೋಗುತ್ತಿದ್ದ ಜನರ ಮೇಲೆ ಸಿದ್ದರಾಮಯ್ಯ ಸಿಟ್ಟು ಪ್ರದರ್ಶಿಸಿದ್ದು, ಮನೆಯಲ್ಲಿ ಇರಬೇಕಿತ್ತು. ಯಾಕೆ ಬರ್ತಿರಾ ಇಲ್ಲಿಗೆ. ಸ್ವಲ್ಪ ಹೊತ್ತು ಕುಳಿತುಕೊಳ್ಳಲು ಆಗಲ್ವಾ? ಕುಳಿತುಕೊಳ್ಳಲು ಆಗದವರು ಯಾಕೆ ಕಾರ್ಯಕ್ರಮಕ್ಕೆ ಬರ್ತಿರಾ? ಎಂದು ರೇಗಿದ್ದಾರೆ.
Update: 2025-09-22 07:46 GMT