ಸ್ವಾತಂತ್ರ್ಯ ಉದ್ಯಾನದಲ್ಲಿ ರೈತರ ಸಂಭ್ರಮಾಚರಣೆ
ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಕುರಿತು ರಾಜ್ಯ ಸರ್ಕಾರ ಅಂತಿಮ ನಿರ್ಧಾರ ಪ್ರಕಟಿಸುತ್ತಿದ್ದಂತೆ ಬೆಂಗಳೂರು ಸ್ವಾತಂತ್ರ್ಯ ಉದ್ಯಾನದಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ರೈತ ಮುಖಂಡರು, ಚಿಂತಕರು ಹಾಗೂ ಹೋರಾಟಗಾರರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಸಮಸ್ತ ರೈತಪರ ಸಂಘಟನೆಗಳ ಹಾಗೂ ಸಮಾನ ಮನಸ್ಕರ ಸಮಾವೇಶದ ಹೆಸರಿನಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ.
Update: 2025-07-15 08:16 GMT