ಆರನೇ ಪಾಯಿಂಟ್ ಸ್ಥಳ ಸಂರಕ್ಷಿತ ಜಾಗ ಎಂದು ಎಸ್‌ಐಟಿ ಅಧಿಕಾರಿಗಳಿಂದ ಗುರುತು
ನೇತ್ರಾವತಿ ಸೇತುವೆ ಬಳಿಯ ಆರನೇ ಪಾಯಿಂಟ್‌ನಲ್ಲಿ ಎಸ್‌ಐಟಿ ಅಧಿಕಾರಿಗಳು ಶೋಧಕಾರ್ಯ ಮುಕ್ತಾಯಗೊಳಿಸಿದ್ದು ಸಂರಕ್ಷಿತ ಜಾಗ ಎಂದು ಅಧಿಕಾರಿಗಳು ಗುರುತಿಸಿದ್ದಾರೆ. ಈ ಜಾಗದ ಸುತ್ತಮುತ್ತ ಪರದೆಯನ್ನು ಕಟ್ಟಲಾಗಿದೆ. ಶ್ವಾನದಳವೂ ಸ್ಥಳಕ್ಕೆ ಆಗಮಿಸಿದ್ದು ಹೆಚ್ಚಿನ ತನಿಖೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಮೂಳೆ ದೊರೆತ ನಂತರ ಎಸ್‌ಐಟಿ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ನಾಪತ್ತೆ ಪ್ರಕರಣಗಳ ಮಾಹಿತಿ ನೀಡುವಂತೆ ತಿಳಿಸಿದೆ ಎಂದು ಮೂಲಗಳು ತಿಳಿಸಿವೆ.
Update: 2025-07-31 09:35 GMT