ಎಸ್‌ಐಟಿಗೆ ದೂರು ವರ್ಗಾವಣೆ ಮಾಡಿ ಆದೇಶ
ಧರ್ಮಸ್ಥಳ ಗ್ರಾಮದಲ್ಲಿ 15 ವರ್ಷಗಳ ಹಿಂದೆ ಬಾಲಕಿಯ ಮೃತದೇಹವನ್ನು ಯಾವುದೇ ಕಾನೂನು ಪ್ರಕ್ರಿಯೆ ನಡೆಸದೇ ಹೂತು ಹಾಕಲಾಗಿದೆ ಎಂದು ಆರೋಪಿಸಿ ಕಡಬ ತಾಲ್ಲೂಕಿನ ಇಚಲಂಪಾಡಿ ಗ್ರಾಮದ ಜಯಂತ್ ಟಿ. ಎಂಬುವರು ನೀಡಿದ್ದ ದೂರನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವರ್ಗಾಯಿಸಲಾಗಿದೆ.
ಜಯಂತ್ ಟಿ. ಅವರು ಧರ್ಮಸ್ಥಳ ಠಾಣೆಗೆ ನೀಡಿರುವ ದೂರನ್ನು (200/DPS/2025) ಮುಂದಿನ ವಿಚಾರಣೆಗಾಗಿ ಎಸ್‌ಐಟಿಗೆ ಹಸ್ತಾಂತರಿಸುವಂತೆ ಡಿಜಿಪಿ ಮತ್ತು ಐಜಿಪಿ ಎಂ.ಎ.ಸಲೀಂ ಆದೇಶ ಮಾಡಿದ್ದಾರೆ' ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮೂಲಗಳು ತಿಳಿಸಿವೆ.
Update: 2025-08-06 06:23 GMT