ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಪಡೆ
ಜಮ್ಮು ಮತ್ತು ಕಾಶ್ಮೀರದ ಉರಿ ಮತ್ತು ಗುರೆಜ್ ವಲಯಗಳಲ್ಲಿ ಶನಿವಾರ ಪಾಕಿಸ್ತಾನ ಪಡೆಗಳು ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಕದನ ವಿರಾಮ ಉಲ್ಲಂಘಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ವಲಯದ ಚಾರುಂಡಾ ಮತ್ತು ಹತ್ಲಂಗಾ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಪಡೆಗಳು ದಾಳಿ ನಡೆಸಿವೆ. ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ವಲಯದ ಬಗ್ಟೋರ್ ಪ್ರದೇಶದಲ್ಲೂ ಅವರು ಕದನ ವಿರಾಮ ಉಲ್ಲಂಘಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸ್ಥಳಗಳಲ್ಲಿ ಭಾರೀ ಶೆಲ್ ದಾಳಿ ನಡೆಯುತ್ತಿದೆ. ಆದರೂ ಇಲ್ಲಿಯವರೆಗೆ ಯಾವುದೇ ಜೀವಹಾನಿ ಸಂಭವಿಸಿಲ್ಲ.ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.
ಶುಕ್ರವಾರ ಬಾರಾಮುಲ್ಲಾ ಮತ್ತು ಕುಪ್ವಾರಾ ಜಿಲ್ಲೆಗಳ ಎಲ್‌ಒಸಿಯಾದ್ಯಂತ ಪಾಕಿಸ್ತಾನ ಪಡೆಗಳು ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದ್ದು, ಆಕೆಯ ಕುಟುಂಬದ ಇಬ್ಬರು ಸದಸ್ಯರು ಗಾಯಗೊಂಡಿದ್ದರು.
Update: 2025-05-10 07:29 GMT