ದಾಖಲೆ ಬರೆದ ರೋಹಿತ್ ಟಾಸ್ ಪ್ರಕ್ರಿಯೆಗೆ... ... IND vs NZ : ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡ
ದಾಖಲೆ ಬರೆದ ರೋಹಿತ್
ಟಾಸ್ ಪ್ರಕ್ರಿಯೆಗೆ ಮೈದಾನಕ್ಕಿಳಿಯುತ್ತಿದ್ದಂತೆ ನಾಯಕ ರೋಹಿತ್ ಶರ್ಮ ದಾಖಲೆಯೊಂದನ್ನು ತಮ್ಮ ಹೆಸೆರಿಗೆ ಬರೆದರು. ಎಲ್ಲ ನಾಲ್ಕು ಐಸಿಸಿ ಟೂರ್ನಿಗಳಲ್ಲಿ ತಂಡವನ್ನು ಮುನ್ನಡೆಸಿದ ವಿಶ್ವದ ಮೊದಲ ನಾಯಕ ಎನಿಸಿಕೊಂಡರು. ರೋಹಿತ್ ನಾಯಕತ್ವದಲ್ಲಿ ಭಾರತ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್, 2023ರ ಏಕದಿನ ವಿಶ್ವಕಪ್, 2024ರ ಟಿ20 ವಿಶ್ವಕಪ್‌ನಲ್ಲಿ ಆಡಿತ್ತು. ರೋಹಿತ್ ಹೊರತುಪಡಿಸಿ ಮಹೇಂದ್ರ ಸಿಂಗ್ ಧೋನಿ ಮತ್ತು ನ್ಯೂಜಿಲ್ಯಾಂಡ್‌ನ ಕೇನ್ ವಿಲಿಯಮ್ಸನ್ ಮೂರು ಮಾದರಿಯ ಐಸಿಸಿ ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸಿದ್ದರು.
Update: 2025-03-09 08:42 GMT