ʼವರದಿ ಒಪ್ಪುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟದ್ದುʼ
ರಾಜ್ಯದಲ್ಲಿ ಒಳ ಮೀಸಲಾತಿ ಸಮೀಕ್ಷೆ ನಡೆಸಿ ರಾಜ್ಯ ಸರ್ಕಾರಕ್ಕೆ ವರದಿ ನೀಡಲಾಗಿದೆ. ಈಗ ವರದಿ ಸರ್ಕಾರದ ಆಸ್ತಿ, ಅದನ್ನು ಒಪ್ಪುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟಿರುವ ವಿಚಾರ ಎಂಉ ನಿವೃತ್ತ ನ್ಯಾ. ಎಚ್.ಎನ್. ನಾಗಮೋಹನ್ ದಾಸ್ ಹೇಳಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2025 ಮಾರ್ಚ್ 25ರಂದು ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ನಿಖರ ದತ್ತಾಂಶಗಳ ಕೊರತೆ ಇದೆ ಎಂದು ವರದಿ ಸಲ್ಲಿಸಲು ಸೂಚಿಸಿತ್ತು. ಸುಮಾರು 60 ದಿನಗಳ ಕಾಲ ಸಮೀಕ್ಷೆ ನಡೆಸಿದೆವು. ಮೊದಲ ಬಾರಿಗೆ ಮೊಬೈಲ್ ಆ್ಯಪ್ ಬಳಸಿ ಸಮೀಕ್ಷೆ ಮಾಡಲಾಗಿದೆ ಎಂದು ಹೇಳಿದರು.
ಸಮೀಕ್ಷೆಯಲ್ಲಿ 1.7 ಕೋಟಿ ಜನರು ಸಮೀಕ್ಷೆಯಲ್ಲಿ ಭಾಗಿಯಾಗಿದ್ದರು. ದತ್ತಾಂಶಗಳನ್ನೊಳಗೊಂಡ 1766 ಪುಟಗಳ ವರದಿ ಸರ್ಕಾರಕ್ಕೆ ಸಲ್ಲಿಸಿದ್ದೇವೆ ಎಂದು ಹೇಳಿದರು.
Update: 2025-08-04 07:41 GMT