ಸಚಿವ ಸಂಪುಟ ಸಭೆಗೂ ಮುನ್ನ ಸಿಎಂ,ಡಿಸಿಎಂ ಹಾಗೂ ಒಕ್ಕಲಿಗ ಸಚಿವರ ಪ್ರತ್ಯೇಕ ಸಭೆ
ರಾಜ್ಯ ಸಚಿವ ಸಂಪುಟ ಸಭೆಗೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಒಕ್ಕಲಿಗ ಸಮುದಾಯದ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆದಿದೆ . ಮೊನ್ನೆ ನಡೆದ ಒಕ್ಕಲಿಗ ಶಾಸಕರ ಸಭೆಯಲ್ಲಿ ವ್ಯಕ್ತಗೊಂಡ ಅಭಿಪ್ರಾಯಗಳನ್ನು ಈ ಸಂದರ್ಭ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದು, ನಮ್ಮ ಸಮುದಾಯದಲ್ಲಿ ಈ ರೀತಿಯ ಅಭಿಪ್ರಾಯವಿದೆ. ಈ ಕುರಿತು ಸರಿಯಾದ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
Update: 2025-04-17 13:05 GMT