ದೆಹಲಿ ಪೊಲೀಸರಿಂದ ತನಿಖೆ ಆರಂಭ ಕಾಲ್ತುಳಿತದ... ... Maha Kumbh 2025 : ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ, ಐವರು ಮಕ್ಕಳು ಸೇರಿ 18 ಭಕ್ತರ ಸಾವು
ದೆಹಲಿ ಪೊಲೀಸರಿಂದ ತನಿಖೆ ಆರಂಭ
ಕಾಲ್ತುಳಿತದ ಬಗ್ಗೆ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದು, ಏನಾಯಿತು ಎಂಬುದನ್ನು ಕಂಡುಹಿಡಿಯಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ.
"ಕಾಲ್ತುಳಿತಕ್ಕೆ ಕಾರಣ ಕಂಡು ಹಿಡಿಯುವುದು ನಮ್ಮ ಮುಖ್ಯ ಗುರಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಆ ಸಮಯದಲ್ಲಿ ಅಧಿಕಾರಿಗಳು ಮಾಡಿರುವ ಪ್ರಕಟಣೆಗಳ ಎಲ್ಲಾ ಮಾಹಿತಿಯನ್ನು ನಾವು ಸಂಗ್ರಹಿಸುತ್ತೇವೆ" ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ಲಾಟ್ ಫಾರ್ಮ್ ಬದಲಾವಣೆಯ ಬಗ್ಗೆ ತಪ್ಪು ಪ್ರಕಟಣೆ ಗೊಂದಲಕ್ಕೆ ಕಾರಣವಾಗಿರಬಹುದು ಎಂದು ಮೂಲಗಳು ತಿಳಿಸಿವೆ.
ಕಾಲ್ತುಳಿತಕ್ಕೂ ಮುನ್ನ ನಿಲ್ದಾಣದ ಪ್ಲಾಟ್ಫಾರ್ಮ್ ಸಂಖ್ಯೆ 14 ಮತ್ತು 15 ರಲ್ಲಿ ಪ್ರಯಾಗ್ರಾಜ್ಗೆ ಹೋಗುವ ರೈಲುಗಳನ್ನು ಹತ್ತಲು ದೊಡ್ಡ ಸಂಖ್ಯೆಯ ಪ್ರಯಾಣಿಕರು ಕಾಯುತ್ತಿದ್ದರು. ರೈಲು ವಿಳಂಬವೇ ಕಾಲ್ತುಳಿತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
Update: 2025-02-16 04:13 GMT