ಬಿಹಾರ ಮೂಲದ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ನಿತೀಶ್... ... Maha Kumbh 2025 : ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ, ಐವರು ಮಕ್ಕಳು ಸೇರಿ 18 ಭಕ್ತರ ಸಾವು

ಬಿಹಾರ ಮೂಲದ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ನಿತೀಶ್

ನವದೆಹಲಿ: ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾನುವಾರ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ.

ಜನನಿಬಿಡ ರೈಲ್ವೆ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವು ಮಂದಿ ಗಾಯಗೊಂಡಿದ್ದಾರೆ. ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಬಿಹಾರದ ಜನರು ಮತ್ತು ಗಾಯಗೊಂಡವರ ನಿಖರ ಸಂಖ್ಯೆಯ ಬಗ್ಗೆ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತದಲ್ಲಿ ಸಂಭವಿಸಿದ ಸಾವುನೋವುಗಳ ಬಗ್ಗೆ ಸಿಎಂ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಬಿಹಾರ ಮೂಲದವರ ಸಾವಿನಿಂದ ಅವರು ತೀವ್ರ ದುಃಖಿತರಾಗಿದ್ದಾರೆ ಮತ್ತು ಮೃತರ ಕುಟುಂಬ ಸದಸ್ಯರಿಗೆ ತಲಾ 2 ಲಕ್ಷ ರೂ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ" ಎಂದು ಸಿಎಂಒ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

Update: 2025-02-16 05:51 GMT

Linked news