ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಎತ್ತಿನಹೊಳೆ ಕಾಮಗಾರಿ ಶೀಘ್ರ ಚಾಲನೆ
ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಎತ್ತಿನಹೊಳೆ ಯೋಜನೆ ಮೂಲಕ ಶೀಘ್ರವೇ ಕುಡಿಯುವ ನೀರು ಪೂರೈಸಲಾಗುವುದು ಎಂದು ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.
ಶ್ರೀನಿವಾಸಪುರ ಶಾಸಕ ಜಿ.ಕೆ. ವೆಂಕಟಶಿವ ರೆಡ್ಡಿ ಅವರ ಗಮನಸೆಳೆಯುವ ಪ್ರಶ್ನೆಗೆ ಉತ್ತರಿಸಿದ ಅವರು, ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ಕುಡಿಯವ ನೀರು ಪೂರೈಸುವ ಕಾಮಗಾರಿಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದರು.
Update: 2025-08-11 12:04 GMT