ಕರ್ನಾಟಕದ ಪ್ರಮುಖ ಅಭ್ಯರ್ಥಿಗಳು ಮತ್ತು... ... Loksabha Election Results 2024| ಬಿಜೆಪಿ+ ಜೆಡಿಎಸ್‌ -19 , ಕಾಂಗ್ರೆಸ್- 9

ಕರ್ನಾಟಕದ ಪ್ರಮುಖ ಅಭ್ಯರ್ಥಿಗಳು ಮತ್ತು ಕ್ಷೇತ್ರಗಳು

ಬೆಂಗಳೂರು ದಕ್ಷಿಣ

ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರನ್ನು  ಜಯನಗರದ ಮಾಜಿ ಶಾಸಕಿ ಮತ್ತು ಕಾಂಗ್ರೆಸ್ ನಾಯಕಿ ಸೌಮ್ಯಾ ರೆಡ್ಡಿ ನಡುವೆ ಪೈಪೋಟಿ ಎದುರಾಗಿದೆ.

ಬೆಂಗಳೂರು ಗ್ರಾಮಾಂತರ

ಕಾಂಗ್ರೆಸ್‌ನ ಡಿ.ಕೆ.ಸುರೇಶ್ ಅವರು ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಹೃದ್ರೋಗ ತಜ್ಞ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಳಿಯ ಸಿ.ಎನ್.ಮಂಜುನಾಥ್ ಅವರನ್ನು ಎದುರಿಸಿದ್ದಾರೆ.

ಹಾಸನ

ಲೈಂಗಿಕ ಕಿರುಕುಳದ ಆರೋಪದ ಮೇಲೆ ಪ್ರಸ್ತುತ ಎಸ್‌ಐಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣ ಜೆಡಿಎಸ್‌ನ ಹಾಲಿ ಸಂಸದರಾಗಿದ್ದು, ಅವರ ವಿರುದ್ಧ ಕಾಂಗ್ರೆಸ್‌ನ ಶ್ರೇಯಸ್ ಪಟೇಲ್ ವಿರುದ್ಧ ಕಣಕ್ಕಿಳಿದಿದ್ದಾರೆ.

ಮಂಡ್ಯ

ಕರ್ನಾಟಕದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಕಾಂಗ್ರೆಸ್‌ನಿಂದ ಸ್ಟಾರ್ ಚಂದ್ರು ಅವರು ಕಣಕ್ಕಿಳಿದಿದ್ದಾರೆ.

ಶಿವಮೊಗ್ಗ

ಈಗಾಗಲೇ ಹಾಲಿ ಸಂಸದರಾಗಿರುವ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ಅವರು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜಕುಮಾರ್ ಅವರನ್ನು ಎದುರಿಸಲಿದ್ದಾರೆ. ಮತ್ತೊಂದೆಡೆ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಉಪಮುಖ್ಯಮಂತ್ರಿ ಕೆ ಎಸ್‌ ಈಶ್ವರಪ್ಪ ಕಣದಲ್ಲಿದ್ದಾರೆ.

ಧಾರವಾಡ

ಧಾರವಾಡದಿಂದ ಬಿಜೆಪಿ ಮತ್ತೊಮ್ಮೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಕಣಕ್ಕಿಳಿಸಿದ್ದು, ಅವರ ವಿರುದ್ಧ ಕಾಂಗ್ರೆಸ್ ಯುವ ನಾಯಕ ವಿನೋದ ಅಸೂಟಿ ಮೊದಲ ಬಾರಿಗೆ ಲೋಕಸಭಾ ಅಖಾಡಕ್ಕೆ ಇಳಿದಿದ್ದಾರೆ.

Update: 2024-06-04 01:42 GMT

Linked news