ಕಾಲ್ತುಳಿತ ದುರಂತದಲ್ಲಿ ಮೃತರ ಕುಟುಂಬಗಳಿಗೆ ಸಂತಾಪ ತಿಳಿಸಿದ ಪ್ರಧಾನಿ

ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದ್ದು ದುರದೃಷ್ಟಕರ, ಈ ಘಟನೆ ತೀವ್ರ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ದುಃಖವನ್ನು ಭರಿಸುವ ಶಕ್ತಿ ದೇವರು ನೀಡಲಿ. ಈ ಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

Update: 2025-09-27 18:00 GMT

Linked news