ಸದನದಲ್ಲಿ ವ್ಯಾಕರಣ ಪಾಠ ಮಾಡಿ ಹಾಸ್ಯ ಚಟಾಕಿ ಹಾರಿಸಿದ ಸಿಎಂ ಸಿದ್ದರಾಮಯ್ಯ

ಸಿದ್ದ ಎಂದರೆ ಈಶ್ವರ, ರಾಮ ಎಂದರೆ ವಿಷ್ಣು, ಪರಮೇಶ್ವರ ಎಂದರೆ ಸವರ್ಣ ದೀರ್ಘಸಂಧಿ ಎಂದು ಸದನದಲ್ಲಿ ಸಿಎಂ ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿದರು. ವಿಧಾನಸಭೆಯಲ್ಲಿ ಸಿಎಂ  ಮತ್ತೊಮ್ಮೆ ಕನ್ನಡ ವ್ಯಾಕರಣ ಪಾಠ ಮಾಡಿದರು.

ಸದನ ಆರಂಭ ಆಗುತ್ತಿದ್ದಂತೆ ಆಡಳಿತ ಪಕ್ಷದವರು ಯಾರೂ ಇಲ್ಲ ಎಂದು ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಪರಮ, ಈಶ್ವರ ಇಲ್ಲಿ ಇದ್ದಾರೆ. ಇನ್ಯಾರು ಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಪ್ರಶ್ನಿಸಿದರು.

 

Update: 2025-08-12 10:46 GMT

Linked news