ಎಫ್‌ಎಸ್ ವಿಕ್ರಮ್ ಮಿಶ್ರಿ ಅವರ ಪುತ್ರಿಯ ಆನ್‌ಲೈನ್ ಟ್ರೋಲಿಂಗ್ ಖಂಡಿಸಿದ ರಾಷ್ಟ್ರೀಯ ಮಹಿಳಾ ಆಯೋಗ

ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿರುವ ಸಂಘರ್ಷದ ನಂತರ, ಡೊನಾಲ್ಡ್‌ ಟ್ರಂಪ್‌ ಮಧ್ಯಸ್ಥಿಕೆಯಲ್ಲಿ ಮೇ10ರಂದು ಕದನ ವಿರಾಮವನ್ನು ಘೋಷಿಸಲಾಯಿತು. ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿಈ ಕದನ ವಿರಾಮದ ಬಗ್ಗೆ ಮಾಹಿತಿ ನೀಡಿದರು. ಅಂದಿನಿಂದ, ವಿದೇಶಾಂಗ ಕಾರ್ಯದರ್ಶಿ ಮಿಶ್ರಿ ಅವರ ಕುಟುಂಬ ಮತ್ತು ವಿಶೇಷವಾಗಿ ಅವರ ಮಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ ಮಾಡುತ್ತಿರುವುದನ್ನು  ರಾಷ್ಟ್ರೀಯ ಮಹಿಳಾ ಆಯೋಗ ತೀವ್ರವಾಗಿ ಖಂಡಿಸಿದೆ.

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ  ವಿಜಯ ರಹತ್ಕರ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಯುವತಿಯ ವೈಯಕ್ತಿಕ ಸಂಪರ್ಕ ವಿವರಗಳನ್ನು ಹಂಚಿಕೊಳ್ಳುವುದನ್ನು ಸಮಿತಿಯು ಖಂಡಿಸಿದೆ. ಹಾಗೂ ಇದು ತೀವ್ರ ಬೇಜವಾಬ್ದಾರಿಯುತ ಕೃತ್ಯ ಮತ್ತು ಆಕೆಯ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಗೌಪ್ಯತೆಯ ಗಂಭೀರ ಉಲ್ಲಂಘನೆ ಎಂದು ಕರೆದಿದೆ. 

ಮಿಸ್ರಿಯಂತಹ ಹಿರಿಯ ನಾಗರಿಕ ಸೇವಕರ ಕುಟುಂಬ ಸದಸ್ಯರ ಮೇಲಿನ ವೈಯಕ್ತಿಕ ದಾಳಿಗಳು ಸ್ವೀಕಾರಾರ್ಹವಲ್ಲ ಮಾತ್ರವಲ್ಲದೆ ನೈತಿಕವಾಗಿ ಅಸಮರ್ಥನೀಯವೂ ಆಗಿದೆ ಎಂದು ರಹತ್ಕರ್ ಒತ್ತಿ ಹೇಳಿದರು.

Update: 2025-05-12 07:58 GMT

Linked news