ದೇಶಾದ್ಯಂತ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಬಿಗಿ ಭದ್ರತೆ

ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಮುಖ ನಗರಗಳು, ಪ್ರವಾಸಿ ತಾಣಗಳು, ಸ್ಥಾವರಗಳು, ಮಿಲಿಟರಿ ನೆಲೆಗಳು ಸೇರಿದಂತೆ ಹಲವೆಡೆ ಭದ್ರತೆ ಹೆಚ್ಚಿಸಲಾಗಿದೆ.

ಈಗಾಗಲೇ ಕೇಂದ್ರ ಗೃಹ ಮಂತ್ರಾಲಯದಿಂದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅಧಿಕೃತ ಸೂಚನೆ ರವಾನೆಯಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲೂ ಪೊಲೀಸ್‌ ಭದ್ರತೆ ಹೆಚ್ಚಿಸಲು ಸೂಚಿಸಲಾಗಿದೆ. 

ಕರ್ನಾಟಕದಲ್ಲೂ ಬೆಂಗಳೂರು, ಮೈಸೂರು ಸೇರಿದಂತೆ ಎಲ್ಲಾ ಪ್ರಮುಖ ಪ್ರದೇಶಗಳಲ್ಲಿ ಪೊಲೀಸ್‌ ಬಂದೋಬಸ್ತ್‌ ಹೆಚ್ಚಿಸಲು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಅಲೋಕ್‌ ಮೋಹನ್‌ ಸೂಚನೆ ನೀಡಿದ್ದಾರೆ.

Update: 2025-04-22 17:21 GMT

Linked news