ಉಗ್ರರ ದಾಳಿಗೆ ಮತ್ತೋರ್ವ ಕನ್ನಡಿಗ ಬಲಿ

ಕಾಶ್ಮೀರದ ಪಹಲ್ಗಾಮ್‌ ಪಟ್ಟಣದಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಬೆಂಗಳೂರಿನ ಮತ್ತೊಬ್ಬ ಸಾಫ್ಟ್‌ವೇರ್ ಎಂಜಿನಿಯರ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಧುಸೂದನ್ ಎಂಬವರು ಈ ದಾಳಿಯಲ್ಲಿ ಮೃತಪಟ್ಟಿದ್ದಾಗಿ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಇದರೊಂದಿಗೆ ರಾಜ್ಯದ ಮೂವರು ಈ ದಾಳಿಯಲ್ಲಿ ಉಸಿರು ಚೆಲ್ಲಿದ್ದಾರೆ. ಶಿವಮೊಗ್ಗದ ಮಂಜುನಾಥ್ ಹಾಗೂ ಹಾವೇರಿ ಮೂಲದ ಭರತ್ ಭೂಷಣ್ ಮತ್ತಿಬ್ಬರು. ಈ ದಾಳಿಯಲ್ಲಿ ಗಾಯಗೊಂಡಿರುವವರ ಪಟ್ಟಿಯಲ್ಲಿ ಕರ್ನಾಟಕದ ಅಭಿಜವಂ ರಾವ್ ಎಂಬವರ ಹೆಸರು ಇದೆ. 

Update: 2025-04-23 07:14 GMT

Linked news