ಉಗ್ರರ ದಾಳಿ ಹಿನ್ನೆಲೆ: ಸರ್ವಪಕ್ಷ ಸಭೆಗೆ ಆಗ್ರಹಿಸಿದ ಮಲ್ಲಿಕಾರ್ಜುನ ಖರ್ಗೆ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತಕ್ಷಣ ಸರ್ವ ಪಕ್ಷಗಳ ಸಭೆ ಕರೆಯಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 'ಈ ಸಂಕಟದ ವೇಳೆಯಲ್ಲಿ ನಾವೆಲ್ಲರೂ ಒಂದಾಗಿದ್ದೇವೆ. ಕೇಂದ್ರ ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ಕೊಡುತ್ತೇವೆ. ಕೇಂದ್ರ ಸರ್ಕಾರ ಬಿಗಿಯಾದ ಕ್ರಮ ತಕ್ಷಣ ತೆಗೆದುಕೊಳ್ಳಬೇಕು. ಉಗ್ರರ ಹುಟ್ಟಡಗಿಸುವ ಮೂಲಕ ಎಚ್ಚರಿಕೆಯ ಸಂದೇಶ ಕೊಡಬೇಕು ಎಂದು ತಿಳಿಸಿದರು. 

Update: 2025-04-23 08:44 GMT

Linked news