ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ಜಮ್ಮು ಸರ್ಕಾರ

ಶ್ರೀನಗರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರವನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಘೋಷಿಸಿದೆ.

"ಪ್ರೀತಿಪಾತ್ರರ ನಷ್ಟಕ್ಕೆ ಯಾವುದೇ ಹಣವು ಎಂದಿಗೂ ಸರಿದೂಗಿಸಲು ಸಾಧ್ಯವಿಲ್ಲ, ಆದರೆ ಬೆಂಬಲ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂ. ಪರಿಹಾರವನ್ನು ಘೋಷಿಸುತ್ತದೆ" ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮ‌ರ್ ಅಬ್ದುಲ್ಲಾ ಅವರು ಹೇಳಿದ್ದಾರೆ. ಮನಮ

Update: 2025-04-23 10:08 GMT

Linked news