ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತೆಲಂಗಾಣ ಸರ್ಕಾರದ ನೆರವು
ಕರ್ನೂಲ್ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಹಾಯ ಮಾಡಲು ತೆಲಂಗಾಣ ಸರ್ಕಾರವು ತುರ್ತು ಸಹಾಯವಾಣಿಯನ್ನು ಸ್ಥಾಪಿಸಿದೆ. ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರ ನಿರ್ದೇಶನದ ಮೇರೆಗೆ ಈ ಸಹಾಯವಾಣಿಯನ್ನು ತೆರೆಯಲಾಗಿದೆ.
ಸಂತ್ರಸ್ತರ ಕುಟುಂಬಗಳಿಗೆ ಸಹಾಯ ಮತ್ತು ಮಾಹಿತಿ ನೀಡಲು ಎಂ. ಶ್ರೀರಾಮಚಂದ್ರ (ಮೊ: 9912919545) ಮತ್ತು ಇ. ಚಿಟ್ಟಿಬಾಬು (ಮೊ: 9440854433) ಎಂಬ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
Update: 2025-10-24 06:36 GMT