ಕೊಡಗು ಜಿಲ್ಲೆಯ ಹಲವೆಡೆ ಮಂಗಳವಾರ ಬೆಳಿಗ್ಗೆಯಿಂದಲೇ... ... ಮೂರನೇ ದಿನವೂ ಮುಂದುವರಿದ ಮಳೆ: ರಸ್ತೆಗಳು ಜಲಾವೃತ, ಮೂವರು ಸಾವು; ಜನಜೀವನ ಅಸ್ತವ್ಯಸ್ತ
ಕೊಡಗು ಜಿಲ್ಲೆಯ ಹಲವೆಡೆ ಮಂಗಳವಾರ ಬೆಳಿಗ್ಗೆಯಿಂದಲೇ ಬಿರುಸಿನ ಮಳೆ
ಕೊಡಗು ಜಿಲ್ಲೆಯ ಹಲವೆಡೆ ಮಂಗಳವಾರ ಬೆಳಿಗ್ಗೆಯಿಂದಲೇ ಬಿರುಸಿನ ಮಳೆ ಸುರಿಯುತ್ತಿದೆ. ಭಾರತೀಯ ಹವಾಮಾನ ಇಲಾಖೆ ಜಿಲ್ಲೆಗೆ 'ರೆಡ್ ಅಲರ್ಟ್' ಘೋಷಿಸಿದೆ.
ಮಡಿಕೇರಿ ನಗರ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ತೀವ್ರಗೊಂಡಿದೆ. ವಿರಾಜಪೇಟೆ, ಸುಂಟಿಕೊಪ್ಪ ಭಾಗಗಳಲ್ಲಿಯೂ ಸಾಧಾರಣ ಮಳೆಯಾಗುತ್ತಿದ್ದರೆ, ಸೋಮವಾರಪೇಟೆ ತಾಲ್ಲೂಕಿನ ಹಲವೆಡೆ ಮಳೆಯಾಗುತ್ತಿದೆ ಎಂದು ವರದಿಯಾಗಿದೆ. ಮಡಿಕೇರಿಯಲ್ಲಿ ನಸುಕಿನಿಂದಲೂ ದಟ್ಟ ಮೋಡಗಳು ಮತ್ತು ಹಿಮ ಕವಿದಿತ್ತು. ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮಳೆಯು ಧಾರಾಕಾರವಾಗಿ ಸುರಿಯುತ್ತಲೇ ಇದೆ.
ಭಾರತೀಯ ಹವಾಮಾನ ಇಲಾಖೆಯು ಕೊಡಗು ಜಿಲ್ಲೆಗೆ 'ರೆಡ್ ಅಲರ್ಟ್' ಘೋಷಿಸಿರುವುದರಿಂದ, ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ನಿರೀಕ್ಷಿಸಲಾಗಿದೆ. ಜಿಲ್ಲೆಯ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
Update: 2025-05-20 07:01 GMT