ಕಾಲ್ತುಳಿತ ದುರಂತ: ಸೂಕ್ತ ತನಿಖೆಗೆ ರಾಜ್ಯಪಾಲರ ಸೂಚನೆ

ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಬಳಿ ನಡೆದ ಕಾಲ್ತುಳಿದ ಬಗ್ಗೆ ಕೂಲಂಕಷ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಹಾಗೂ ಇಂತಹ ದುರ್ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ತಿಳಿಸಿದ್ದಾರೆ. 

ಬುಧವಾರ ಆರ್‌ಸಿಬಿ ವಿಜಯೋತ್ಸವ ಕಣ್ತುಂಬಿಕೊಳ್ಳಲು ಸಾವಿರಾರು ಅಭಿಮಾನಿಗಳು ಕ್ರೀಡಾಂಗಣದ ಬಳಿ ಸೇರಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿ 11 ಜನ ಮೃತಪಟ್ಟು 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಘಟನೆಗೆ ತಮ್ಮ ಸಾಮಾಜಿಕ ಜಾಲತಾಣ ʼಎಕ್ಸ್‌ʼನಲ್ಲಿ ಪ್ರತಿಕ್ರಿಯಿಸಿರುವ ರಾಜ್ಯಪಾಲರು, ಕ್ರೀಡಾಂಗಣದ ಹೊರಗೆ ಸಂಭವಿಸಿದ ದುರಂತದ ಕುರಿತು ನನಗೆ ವಿಷಾದವಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಹಾಗೂ ಗಾಯಗೊಂಡವರು ಬೇಗನೆ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

 

Update: 2025-06-05 05:47 GMT

Linked news