ಕಾಲ್ತುಳಿತ ದುರಂತ: ಸ್ವಯಂಪ್ರೇರಿತ ಪಿಐಎಲ್‌ ದಾಖಲಿಸಿಕೊಂಡ ಹೈಕೋರ್ಟ್‌, ಮಧ್ಯಾಹ್ನ ವಿಚಾರಣೆ

 

ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಕ್ರಿಕೆಟ್‌ ಅಭಿಮಾನಿಗಳು ಮೃತಪಟ್ಟ ಘಟನೆಗೆ ಸಂಬಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಜಮಾಯಿಸಿದ್ದ ಲಕ್ಷಾಂತರ ಕ್ರೀಡಾಭಿಮಾನಿಗಳ ನಡುವೆ ಕಾಲ್ತುಳಿತ ಸಂಭವಿಸಿ ಹಲವರ ಜೀವಹಾನಿಯಾಗಿದೆ. ಈ ಘಟನೆ ಕುರಿತು ಕೂಡಲೇ ವರದಿ ಸಲ್ಲಿಸುವಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮಧ್ಯಾಹ್ನ 2.30 ಕ್ಕೆ ನಿಗದಿಪಡಿಸಿದೆ.

Update: 2025-06-05 07:11 GMT

Linked news