ಇದೇ ಮೊದಲ ಬಾರಿಗೆ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ... ... Republic day 2025: ದೆಹಲಿಯ ಬಾನಲ್ಲಿ ಅಬ್ಬರಿಸಿದ ಭಾರತದ ಯುದ್ಧ ವಿಮಾನಗಳು

ಇದೇ ಮೊದಲ ಬಾರಿಗೆ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದೇಶೀಯವಾಗಿ ಅಭಿವೃದ್ಧಿಪಡಿಸಿದ ಅಲ್ಪ-ಶ್ರೇಣಿಯ ಯುದ್ಧತಂತ್ರದ ಕ್ಷಿಪಣಿಯನ್ನು ಭಾನುವಾರ ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಪ್ರದರ್ಶಿಸಲಾಯಿತು.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದ ಈ ಕ್ಷಿಪಣಿ ಪರಮಾಣು ಸಿಡಿತಲೆಯನ್ನು ಹೊತ್ತೊಯ್ಯುವ ಸಾಮರ್ಥ್ಯವನ್ನು ಹೊಂದಿದೆ. ಇದು 500ರಿಂದ1,000 ಕೆ.ಜಿ ಪೇಲೋಡ್ ಸಾಮರ್ಥ್ಯ ಹೊಂದಿರುವ ಅಲ್ಪ-ವ್ಯಾಪ್ತಿಯ ಕ್ಷಿಪಣಿಯಾಗಿದೆ. ಇದು 150 ರಿಂದ 500 ಕಿ.ಮೀ ವ್ಯಾಪ್ತಿಯನ್ನು ಹೊಂದಿದೆ.

ರಾಷ್ಟ್ರ ರಾಜಧಾನಿಯಲ್ಲಿ ನಡೆದ ಭವ್ಯ ಮೆರವಣಿಗೆಯಲ್ಲಿ ದೇಶೀಯವಾಗಿ ನಿರ್ಮಿಸಲಾದ ಕ್ಷಿಪಣಿಗಳು, ಕಣ್ಗಾವಲು ವ್ಯವಸ್ಥೆಗಳು ಮತ್ತು ಶಸ್ತ್ರಾಸ್ತ್ರ ವ್ಯವಸ್ಥೆಗಳು ಭಾರತದ ಬೆಳೆಯುತ್ತಿರುವ ಮಿಲಿಟರಿ ಪರಾಕ್ರಮವನ್ನು ಪ್ರತಿಬಿಂಬಿಸುತ್ತಿದ್ದವು.

Update: 2025-01-26 11:17 GMT

Linked news