ಬೆಳಗಾವಿ: ಇಲ್ಲಿನ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ... ... ಮಂಗಳವಾರ ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ: ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭ

ಬೆಳಗಾವಿ: ಇಲ್ಲಿನ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಂಡಿತ ನೆಹರೂ ಸಂಯುಕ್ತ ಜ್ಯೂನಿಯರ್ ಕಾಲೇಜು ಆವರಣದಲ್ಲಿರುವ ಮತಗಟ್ಟೆ ಸಂಖ್ಯೆ 201ರಲ್ಲಿ ಸಿಬ್ಬಂದಿ ಊಟಕ್ಕಾಗಿ ಮತದಾನ ಪ್ರಕ್ರಿಯೆ ಸ್ಥಗಿತಗೊಳಿಸಿದ್ದರಿಂದ ಮತದಾರರು ಹಾಗೂ ಹಿರಿಯ ನಾಗರಿಕರು ಅರ್ಧ ಗಂಟೆಗೂ ಹೆಚ್ಚು ಕಾಲ ಪರದಾಡಿದರು. 'ನೀವು ಒಬ್ಬೊಬ್ಬರೇ ಊಟ ಮಾಡಿ. ಮತದಾನ ಪ್ರಕ್ರಿಯೆ ಮುಂದುವರಿಸಿ' ಎಂದು ಮತದಾರರು ಕೋರಿದರೂ, ಸಿಬ್ಬಂದಿ ಪಟ್ಟು ಸಡಿಲಿಸಲಿಲ್ಲ. ಹಾಗಾಗಿ ಮತದಾನ ಆರಂಭವಾಗುವವರೆಗೂ ಜನರು ಕಾಯುತ್ತ ಕುಳಿತುಕೊಳ್ಳಬೇಕಾಯಿತು.

Update: 2024-05-07 11:08 GMT

Linked news