ವಿಧಾನಸಭೆಯಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವಿಧೇಯಕ ಚರ್ಚೆ

ಮಂಗಳವಾರ ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ತಿದ್ದುಪಡಿ ವಿಧೇಯಕದ ಕುರಿತು ಬೆಂಗಳೂರು ನಗರ ಶಾಸಕರು ಚರ್ಚೆ ನಡೆಸುತ್ತಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್‌ ವಿವರಣೆ ನೀಡಿದ್ದಾರೆ.

ಈ ವೇಳೆ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಮಧ್ಯಪ್ರವೇಶಿಸಿ, ಸಿಟಿ ಕಾರ್ಪೋರೇಷನ್‌ಗಳನ್ನು ಹೇಗೆ ಸೇರಿಸಿದ್ದಿರಾ ಎಂದು ಸರಿಯಾಗಿ ವಿವರಿಸಿ ಎಂದು ತಿಳಿಸಿದರು.

ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದು, ಸದಸ್ಯತ್ವ ವಿಚಾರದಲ್ಲಿ ಯಾವುದೇ ಗೊಂದಲ ಬೇಡ, ಈ ಕಾರಣಕ್ಕೆ ನಾವೇ ಎಲ್ಲವನ್ನೂ ಸರಿಪಡಿಸುವ ಕೆಲಸ ಮಾಡಿದ್ದೇವೆ. ಅದನ್ನು ತಿದ್ದುಪಡಿ ಮಾಡಿದ್ದೇವೆ ಎಂದು ತಿಳಿಸಿದರು.

 

Update: 2025-08-19 06:16 GMT

Linked news