ತೆಲಂಗಾಣದ ಸಿಗಾಚಿ ಫಾರ್ಮಾ ಕಾರ್ಖಾನೆ ಸ್ಫೋಟ: ಸಾವಿನ... ... Telangana Sigachi pharma fire LIVE ’ ತೆಲಂಗಾಣ ಫಾರ್ಮಾ ಘಟಕದಲ್ಲಿ ಸ್ಫೋಟ : ಸಾವಿನ ಸಂಖ್ಯೆ 42ಕ್ಕೆ ಏರಿಕೆ, ₹1 ಕೋಟಿ ಪರಿಹಾರ ಘೋಷಣೆ
ತೆಲಂಗಾಣದ ಸಿಗಾಚಿ ಫಾರ್ಮಾ ಕಾರ್ಖಾನೆ ಸ್ಫೋಟ: ಸಾವಿನ ಸಂಖ್ಯೆ 42ಕ್ಕೆ ಏರಿಕೆ, ಮತ್ತಷ್ಟು ಏರುವ ಸಾಧ್ಯತೆ
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಾಶಮೈಲಾರಾಮ್‌ನಲ್ಲಿರುವ ಸಿಗಾಚಿ ಇಂಡಸ್ಟ್ರೀಸ್‌ನ ಫಾರ್ಮಾ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಮೃತರ ಸಂಖ್ಯೆ 42ಕ್ಕೆ ಏರಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಸ್ಫೋಟ ಸಂಭವಿಸಿದ ನಂತರ ನಡೆಸಿದ ರಕ್ಷಣಾ ಕಾರ್ಯಾಚರಣೆಯಲ್ಲಿ ಭಗ್ನಾವಶೇಷಗಳಿಂದ ಇನ್ನಷ್ಟು ಶವಗಳನ್ನು ಹೊರತೆಗೆಯಲಾಗುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ದುರಂತವು ಸೋಮವಾರ ಸಂಭವಿಸಿದ್ದು, ಕಾರ್ಖಾನೆಯಲ್ಲಿ ನಡೆದ ರಾಸಾಯನಿಕ ಕ್ರಿಯೆಯೇ ಸ್ಫೋಟಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಸಿಗಾಚಿ ಇಂಡಸ್ಟ್ರೀಸ್ ಲಿಮಿಟೆಡ್ ಔಷಧೀಯ ಪದಾರ್ಥಗಳ ತಯಾರಿಕೆಯಲ್ಲಿ ಪರಿಣತಿ ಹೊಂದಿರುವ ಕಂಪನಿಯಾಗಿದೆ.
Update: 2025-07-01 04:14 GMT