5 ಕಿ.ಮೀ. ದೂರದವರೆಗೂ ಕೇಳಿದ ಸ್ಫೋಟದ ಸದ್ದು ಸಂಗಾರೆಡ್ಡಿ... ... Telangana Sigachi pharma fire LIVE ’ ತೆಲಂಗಾಣ ಫಾರ್ಮಾ ಘಟಕದಲ್ಲಿ ಸ್ಫೋಟ : ಸಾವಿನ ಸಂಖ್ಯೆ 42ಕ್ಕೆ ಏರಿಕೆ, ₹1 ಕೋಟಿ ಪರಿಹಾರ ಘೋಷಣೆ
5 ಕಿ.ಮೀ. ದೂರದವರೆಗೂ ಕೇಳಿದ ಸ್ಫೋಟದ ಸದ್ದು
ಸಂಗಾರೆಡ್ಡಿ ಜಿಲ್ಲೆಯ ಪಾಶಮೈಲಾರಾಮ್‌ನಲ್ಲಿರುವ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಕಾರ್ಖಾನೆಯಲ್ಲಿ ಸೋಮವಾರ ಸಂಭವಿಸಿದ ಸ್ಫೋಟದ ಭೀಕರತೆ ಈಗ ಮತ್ತಷ್ಟು ಸ್ಪಷ್ಟವಾಗಿದೆ. ಸ್ಫೋಟದ ತೀವ್ರತೆಯು ಎಷ್ಟು ಪ್ರಬಲವಾಗಿತ್ತೆಂದರೆ, ಅದರ ಸದ್ದು ಸುಮಾರು 5 ಕಿಲೋಮೀಟರ್ ದೂರದವರೆಗೂ ಕೇಳಿಸಿದೆ. ಘಟನೆಯಿಂದ ಕಾರ್ಖಾನೆಯ ಒಂದು ಭಾಗ ಸಂಪೂರ್ಣವಾಗಿ ಕುಸಿದುಬಿದ್ದಿದ್ದು, ಭಾರೀ ಬೆಂಕಿ ಮತ್ತು ದಟ್ಟ ಹೊಗೆ ಆವರಿಸಿತ್ತು.
ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳದ 10 ವಾಹನಗಳನ್ನು ಬಳಸಲಾಗಿದೆ. ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ರಕ್ಷಣಾ ಕಾರ್ಯಾಚರಣೆಯಲ್ಲಿ ಸ್ಥಳೀಯ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಸಿಬ್ಬಂದಿ ಪಾಲ್ಗೊಂಡು ರಕ್ಷಣಾ ಕಾರ್ಯ ನಡೆಸಿದರು.
ತೆಲಂಗಾಣ ರಾಜ್ಯ ವಿಪತ್ತು ನಿರ್ವಹಣೆ ಮತ್ತು ಅಗ್ನಿಶಾಮಕ ಸೇವೆಗಳ ನಿರ್ದೇಶಕ ವೈ. ನಾಗಿ ರೆಡ್ಡಿ ಅವರ ಪ್ರಕಾರ, "ಕಾರ್ಖಾನೆಯ ಡ್ರೈಯಿಂಗ್ ಘಟಕದಲ್ಲಿ ಒತ್ತಡ ಹೆಚ್ಚಾಗಿ ಸ್ಫೋಟ ಸಂಭವಿಸಿರುವ ಸಾಧ್ಯತೆ ಇದೆ." ಈ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಈಗಾಗಲೇ 42ಕ್ಕೆ ಏರಿದ್ದು, ಭಗ್ನಾವಶೇಷಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿದಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಮೃತದೇಹಗಳ ಗುರುತು ಪತ್ತೆಗಾಗಿ ಡಿಎನ್‌ಎ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.