ಪ್ರಧಾನಿ ಮೋದಿ ಸಂತಾಪ, ಮೃತರಿಗೆ 2 ಲಕ್ಷ ರೂ. ಪರಿಹಾರ... ... Telangana Sigachi pharma fire LIVE ’ ತೆಲಂಗಾಣ ಫಾರ್ಮಾ ಘಟಕದಲ್ಲಿ ಸ್ಫೋಟ : ಸಾವಿನ ಸಂಖ್ಯೆ 42ಕ್ಕೆ ಏರಿಕೆ, ₹1 ಕೋಟಿ ಪರಿಹಾರ ಘೋಷಣೆ
ಪ್ರಧಾನಿ ಮೋದಿ ಸಂತಾಪ, ಮೃತರಿಗೆ 2 ಲಕ್ಷ ರೂ. ಪರಿಹಾರ ಘೋಷಣೆ
ಸಂಗಾರೆಡ್ಡಿ ಜಿಲ್ಲೆಯ ಪಾಶಮೈಲಾರಾಮ್‌ನಲ್ಲಿರುವ ಸಿಗಾಚಿ ಇಂಡಸ್ಟ್ರೀಸ್‌ನ ಫಾರ್ಮಾ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಪ್ರಧಾನಿಗಳು, ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (PMNRF) ಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಅಲ್ಲದೆ, ಈ ದುರ್ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ನಗದು ಪರಿಹಾರವನ್ನು ಪ್ರಧಾನ ಮಂತ್ರಿ ಕಾರ್ಯಾಲಯ ಘೋಷಿಸಿದೆ. ಸೋಮವಾರ ಸಂಭವಿಸಿದ ಈ ಸ್ಫೋಟದಲ್ಲಿ ಸಾವಿನ ಸಂಖ್ಯೆ 42ಕ್ಕೆ ಏರಿದ್ದು, ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. ಕಾರ್ಖಾನೆಯ ಡ್ರೈಯಿಂಗ್ ಘಟಕದಲ್ಲಿ ಒತ್ತಡ ಹೆಚ್ಚಾಗಿ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.
Update: 2025-07-01 04:57 GMT