ಸಿಗಾಚಿ ಕಾರ್ಖಾನೆ ಸ್ಫೋಟ: ಸಿಎಂ ರೇವಂತ್ ರೆಡ್ಡಿ,... ... Telangana Sigachi pharma fire LIVE ’ ತೆಲಂಗಾಣ ಫಾರ್ಮಾ ಘಟಕದಲ್ಲಿ ಸ್ಫೋಟ : ಸಾವಿನ ಸಂಖ್ಯೆ 42ಕ್ಕೆ ಏರಿಕೆ, ₹1 ಕೋಟಿ ಪರಿಹಾರ ಘೋಷಣೆ
ಸಿಗಾಚಿ ಕಾರ್ಖಾನೆ ಸ್ಫೋಟ: ಸಿಎಂ ರೇವಂತ್ ರೆಡ್ಡಿ, ರಾಜ್ಯಪಾಲರಿಂದ ತೀವ್ರ ಸಂತಾಪ
ಸಂಗಾರೆಡ್ಡಿ ಜಿಲ್ಲೆಯ ಪಾಶಮೈಲಾರಾಮ್‌ನಲ್ಲಿರುವ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟಕ್ಕೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಕಾರ್ಖಾನೆಯಲ್ಲಿ ಸಿಲುಕಿರುವ ಎಲ್ಲಾ ಕಾರ್ಮಿಕರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮತ್ತು ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಪ್ರಾಥಮಿಕವಾಗಿ ರಾಸಾಯನಿಕ ಕ್ರಿಯೆಯಿಂದ ಇದು ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಈ ದುರಂತದಲ್ಲಿ ಈಗಾಗಲೇ 42 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆಯಿದೆ.
ತೆಲಂಗಾಣ ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಕೂಡ ಈ ಭೀಕರ ಅಪಘಾತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ ರಾಜ್ಯಪಾಲರು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಈ ಘಟನೆ ರಾಜ್ಯದಲ್ಲಿ ಕೈಗಾರಿಕಾ ಸುರಕ್ಷತೆಯ ಬಗ್ಗೆ ಗಂಭೀರ ಚರ್ಚೆಗೆ ನಾಂದಿ ಹಾಡಿದೆ.