ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಭೇಟಿ ಮಾಡಿದ ಉತ್ತರ ಸೇನಾ ಕಮಾಂಡರ್
ಉತ್ತರ ಸೇನಾ ಕಮಾಂಡರ್, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಬುಧವಾರ ಭೇಟಿ ಮಾಡಿ ಕೇಂದ್ರಾಡಳಿತ ಪ್ರದೇಶದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯ ಬಗ್ಗೆ ವಿವರಿಸಿದರು. ಈ ಬಗ್ಗೆ ರಾಜಭವನದಲ್ಲಿ ಸಭೆ ನಡೆಸಲಾಯಿತು ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ಕಣಿವೆಯಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳು ಮತ್ತು ವಿವಿಧ ಅಂಶಗಳ ಬಗ್ಗೆ ಉತ್ತರ ಕಮಾಂಡ್‌ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ (ಜಿಒಸಿ-ಇನ್-ಸಿ), ಲೆಫ್ಟಿನೆಂಟ್ ಜನರಲ್ ಶರ್ಮಾ ಸಿನ್ಹಾ ಅವರಿಗೆ ವಿವರಿಸಿದರು ಎಂದು ವಕ್ತಾರರು ತಿಳಿಸಿದ್ದಾರೆ.
Update: 2025-05-14 09:02 GMT