ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ನಿಂದ ದೂರು; ಆರು ನಾಯಕರಿಗೆ ಮಾತ್ರ ಅವಕಾಶ
ಮತಗಳ್ಳತನ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಫ್ರೀಡಂ ಪಾರ್ಕ್‌ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆ ಬಳಿಕ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಲಿದ್ದು, 6 ನಾಯಕರಿಗಷ್ಟೇ ಅನುಮತಿ ನೀಡಲಾಗಿದೆ.
ರಾಜ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ನಾಯಕರಿಂದ ದೂರು ಹಿನ್ನೆಲೆ ಮುಖ್ಯ ಚುನಾವಣಾಧಿಕಾರಿ ಕಚೇರಿ ಬಳಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ಸುರ್ಜೇವಾಲ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ಗಷ್ಟೇ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ದೂರು ಸಲ್ಲಿಸಲು ಅನುಮತಿ ನೀಡಿದ್ದಾರೆ.
Update: 2025-08-08 07:02 GMT