ವಯನಾಡ್‌ ಭೂಕುಸಿತ ಬಿಕ್ಕಟ್ಟಿನ ಮೇಲೆ ಪ್ರಧಾನಿ ಮೋದಿ ನಿಗಾ:... ... Wayanad Landslide LIVE | ಸಾವಿನ ಸಂಖ್ಯೆ 243ಕ್ಕೆ ಏರಿಕೆ; ಅಮಿತ್ ಶಾ ಮುನ್ಸೂಚನೆ ಹೇಳಿಕೆಗೆ ಕೇರಳ ಸಿಎಂ ತಿರುಗೇಟು

ವಯನಾಡ್‌ ಭೂಕುಸಿತ ಬಿಕ್ಕಟ್ಟಿನ ಮೇಲೆ ಪ್ರಧಾನಿ ಮೋದಿ ನಿಗಾ: ಕೇಂದ್ರ ಸಚಿವ ಕುರಿಯನ್

ಕೇರಳದ ವಯನಾಡ್ ಜಿಲ್ಲೆಯ ಭೂಕುಸಿತದ ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಜಾರ್ಜ್‌ ಕುರಿಯನ್ ಹೇಳಿದ್ದಾರೆ.

ಮಂಗಳವಾರ ರಾತ್ರಿ ವಯನಾಡಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದ ಜನರನ್ನು ಭೇಟಿ ಮಾಡಿದ ಕುರಿಯನ್, ದುರಂತದಲ್ಲಿ ಸಂತ್ರಸ್ತರ ರಕ್ಷಣಾ ಪುಯತ್ನಗಳಿಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದೆ ಎಂದು ಹೇಳಿದರು.

"ಪರಿಸ್ಥಿತಿಯನ್ನು ಕೇಂದ್ರ ಸರ್ಕಾರವು ಉನ್ನತ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡುತ್ತಿದೆ. ಪ್ರಧಾನ ಮಂತ್ರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಘಟನಶ ಸ್ಥಳಗಳಿಗೆ ಭೇಟಿ ನೀಡಲು ನನ್ನನ್ನು ನಿಯೋಜಿಸಿದ್ದಾರ "ಗೃಹ ಸಚಿವಾಲಯದ ಎರಡೂ ನಿಯಂತ್ರಣ ಕೊಠಡಿಗಳು 24X7 ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿವೆ ಮತ್ತು ರಾಜ್ಯಕ್ಕೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿವೆ" ಎಂದು ಅವರು ಹೇಳಿದರು.

Update: 2024-07-31 09:22 GMT

Linked news