ಸೆಟ್ಟೇರಲಿದೆ ನಾಡಪ್ರಭು ಕೆಂಪೇಗೌಡ ಜೀವನಾಧಾರಿತ ಸಿನಿಮಾ

ʼಧರ್ಮಬೀರು ನಾಡಪ್ರಭು ಕೆಂಪೇಗೌಡʼ ಎಂಬ ಶೀರ್ಷಿಕೆಯಡಿ ಸಿನಿಮಾ ಘೋಷಣೆಯಾಗಿದೆ.

Update: 2024-04-08 14:13 GMT
ಧರ್ಮಬೀರು ನಾಡಪ್ರಭು ಕೆಂಪೇಗೌಡ ಎಂಬ ಶೀರ್ಷಿಕೆಯಡಿ ಸಿನಿಮಾ ಘೋಷಣೆಯಾಗಿದೆ.
Click the Play button to listen to article

ಬೆಂಗಳೂರು ಕಟ್ಟಿದ ನಾಡಪ್ರಭುಕೆಂಪೇಗೌಡ ಅವರ ಜೀವನ ಚರಿತ್ರೆ ಈಗ ಸಿನಿಮಾ ಆಗುತ್ತಿದೆ. ಧರ್ಮಬೀರು ನಾಡಪ್ರಭು ಕೆಂಪೇಗೌಡ ಎಂಬ ಶೀರ್ಷಿಕೆಯಡಿ ಸಿನಿಮಾ ಘೋಷಣೆಯಾಗಿದೆ.

ಬೆಂಗಳೂರಿಗೆ ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂಬ ಬಿರುದುಗಳು ಇವೆ. ಇದನ್ನು ಕಟ್ಟಿ ಬೆಳೆಸಿದ್ದು ಕೆಂಪೇಗೌಡರು. ಅವರು ಬೆಂಗಳೂರು ಕಟ್ಟಿದ್ದು ಹೇಗೆ ಎಂಬ ಕಥೆಯನ್ನು ಸಿನಿಮಾ ರೂಪಕ್ಕೆ ಇಳಿಸಲಾಗುತ್ತಿದೆ. ರಾಜ್ಯ ಪ್ರಶಸ್ತಿ ವಿಜೇತ ದಿನೇಶ್ ಬಾಬು ‘ಧರ್ಮಬೀರು ನಾಡಪ್ರಭು ಕೆಂಪೇಗೌಡ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

 ನಾಡಪ್ರಭು ಕೆಂಪೇಗೌಡರಾಗಿ ಬಣ್ಣ ಹಚ್ಚುತ್ತಿರುವವರು ಯಾರು ಅನ್ನೋದನ್ನು ಸದ್ಯಕ್ಕೆ ಸಿನಿಮಾ ತಂಡ ರಿವೀಲ್ ಮಾಡಿಲ್ಲ. ಜನಪ್ರಿಯ ನಟರೊಬ್ಬರು ಕೆಂಪೇಗೌಡರಾಗಿ ಕಾಣಿಸಿಕೊಳ್ಳಲಿದ್ದಾರಂತೆ. ಈಗಾಗಲೇ ಆ ನಟ ತಮ್ಮ ಪಾತ್ರದ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಆ ನಟ ಯಾರು ಎಂದು ಸಿನಿಮಾ ತಂಡ ಪರಿಚಯ ಮಾಡಿಕೊಡಲಿದೆ.

 ವೃತ್ತಿಯಲ್ಲಿ ವೈದ್ಯ, ಸಂಗೀತ ನಿರ್ದೇಶಕ ಕಿರಣ್ ತೋಟಂಬೈಲ್ ಅವರು ಈ ಸಿನಿಮಾಕ್ಕೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಕಿರಣ್ ಅವರು ಕೆಂಪೇಗೌಡ ಮೆಡಿಕಲ್ ಕಾಲೇಜ್‌ನಲ್ಲಿ ವ್ಯಾಸಂಗ ಮಾಡುವಾಗಲೇ ಕೆಂಪೇಗೌಡರ ಸಿನಿಮಾ ಮಾಡಬೇಕು ಅಂತ ಅಂದುಕೊಂಡಿದ್ದರಂತೆ.

 ಧರ್ಮೇಂದ್ರ ಕುಮಾರ್ ಅರೇನಹಳ್ಳಿ ‘ಧರ್ಮಬೀರು ನಾಡಪ್ರಭು ಕೆಂಪೇಗೌಡ’ ಸಿನಿಮಾಗೆ ಕಥೆ ಬರೆದಿದ್ದಾರೆ. ಸಂಕೇತ್ ಎಂವೈಎಸ್ ಛಾಯಾಗ್ರಹಣ, ಉಜ್ವಲ್ ಕುಲಕರ್ಣಿ ಸಂಕಲನ ಚಿತ್ರಕ್ಕಿದೆ. ಕಿರಣ್ ತೋಟಂಬೈಲ್ ಅವರೇ ಸಂಗೀತ ನೀಡುತ್ತಿದ್ದಾರೆ. ವಿ ನಾಗೇಂದ್ರ ಪ್ರಸಾದ್ ಹಾಗೂ ಸಂತೋಷ್ ನಾಯಕ್ ಸಾಹಿತ್ಯ ಬರೆದಿದ್ದಾರೆ. ಮಾಸ್ತಿ ಹಾಗೂ ರಘು‌ ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಕನ್ನಡದ ಜೊತೆ ಇಂಗ್ಲಿಷ್​ನಲ್ಲೂ ಸಿನಿಮಾ ನಿರ್ಮಾಣವಾಗಲಿದೆ. ಮೇ ಅಥವಾ ಜೂನ್ ತಿಂಗಳಲ್ಲಿ‌ ಸಿನಿಮಾಗೆ ಮುಹೂರ್ತ ನಡೆಯಲಿದೆ.

Tags:    

Similar News