ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಅದಿತಿ ಪ್ರಭುದೇವ
ಕನ್ನಡದ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.;
By : The Federal
Update: 2024-04-10 13:22 GMT
ಕನ್ನಡದ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಸುದ್ದಿಯನ್ನು ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಮಗುವಿನ ಕೈಯನ್ನು ತಾವು ಹಾಗೂ ತಮ್ಮ ಪತಿ ಯಶಸ್ ಹಿಡಿದುಕೊಂಡಿರುವ ಚಿತ್ರವನ್ನು ಅಪ್ಲೋಡ್ ಮಾಡಿದ್ದು, 'ನಮ್ಮನೆ ಮಹಾಲಕ್ಷ್ಮಿ.. ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು' ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಇನ್ನು ಏಪ್ರಿಲ್ 4 ರಂದು ಗುರುವಾರ ಹೆಣ್ಣು ಮಗುವಿಗೆ ಅದಿತಿ ಪ್ರಭುದೇವ ಜನ್ಮ ನೀಡಿದ್ದಾರೆ. ಮಗುವಿಗೆ ಜನ್ಮ ನೀಡಿದ ನಟಿ ಅದಿತಿಗೆ ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದು, ಪುಟ್ಟ 'ಮಹಾಲಕ್ಷ್ಮಿ'ಗೆ ಶುಭ ಕೋರಿದ್ದಾರೆ.
ಇತ್ತೀಚೆಗಷ್ಟೇ ನಟಿ ಅದಿತಿ ಪ್ರಭುದೇವ ಅವರ ಸೀಮಂತ ಗ್ರ್ಯಾಂಡ್ ಆಗಿ ನಡೆದಿತ್ತು.ತೋತಾಪುರಿ’, ‘ಬ್ರಹ್ಮಾಚಾರಿ’, ‘ರಂಗನಾಯಕಿ’, ‘ಬಜಾರ್’, ‘ಸಿಂಗಾ’, ‘ಧೈರ್ಯಂ’ ಮುಂತಾದ ಸಿನಿಮಾಗಳಲ್ಲಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ.