ನಟಿ ಹೇಮಾಗೆ ಮತ್ತೆ ನ್ಯಾಯಾಂಗ ಬಂಧನ
ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧನವಾಗಿದ್ದ ತೆಲುಗು ನಟಿ ಹೇಮಾ ಅವರ ಸಿಸಿಬಿ ಕಸ್ಟಡಿ ಅಂತ್ಯಗೊಂಡಿದ್ದು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.;
ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧತ ತೆಲುಗು ನಟಿ ಹೇಮಾ ಅವರ ಸಿಸಿಬಿ ಕಸ್ಟಡಿ ಅಂತ್ಯಗೊಂಡಿದ್ದು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನ್ಯಾಯಾಂಗ ಬಂಧನದಲ್ಲಿದ್ದ ಅವರನ್ನು ಸಿಸಿಬಿ ಅಧಿಕಾರಿಗಳು ಒಂದು ದಿನದ ಕಸ್ಟಡಿಗೆ ತೆಗೆದುಕೊಂಡಿದ್ದರು. ಗುರುವಾರ (ಜೂ.6) ಕಸ್ಟಡಿ ಅವಧಿ ಮುಕ್ತಾಯಗೊಂಡಿದ್ದು, ಇದೀಗ ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಈ ಹಿಂದೆ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು ನಟಿ ಹೇಮಾ ಅವರನ್ನು ಜೂ.14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದರು. ಬುಧವಾರ ಹೇಮಾರನ್ನು ಕೋರ್ಟ್ಗೆ ಹಾಜರುಪಡಿಸಿದ್ದ ಸಿಸಿಬಿ ಪೊಲೀಸರು ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ಅದಕ್ಕೆ ಸಮ್ಮತಿ ಸಿಕ್ಕಿತ್ತು. ಒಂದು ದಿನದ ವಿಚಾರಣೆ ಬಳಿಕ ಗುರುವಾರ ಹೇಮಾ ಅವರನ್ನು ಸಿಸಿಬಿ ಪೊಲೀಸರು ಆನೇಕಲ್‌ನ ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.
ಏನಿದು ಪ್ರಕರಣ
ಮೇ 19ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಫಾರ್ಮ್ ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ಸೋಮವಾರ ಸಂಜೆ ನಟಿ ಹೇಮಾ ಹಾಜರಾಗಿದ್ದರು. ಈ ವೇಳೆ ಅವರನ್ನು ಅಧಿಕಾರಿಗಳು ಬಂಧಿಸಿದ್ದರು.