ಚಿತ್ರದ ಮುಹೂರ್ತಕ್ಕೂ ಮುನ್ನ ಗುಮ್ಮಡಿ ನರಸಯ್ಯ ಭೇಟಿಯಾದ ಶಿವರಾಜ್‌ಕುಮಾರ್

ಶಿವರಾಜ್‌ಕುಮಾರ್ ಅವರು ತಮ್ಮ ಪತ್ನಿ ಗೀತಾ ಅವರೊಂದಿಗೆ ಗುಮ್ಮಡಿ ನರಸಯ್ಯ ಅವರ ಮನೆಗೆ ತೆರಳಿ, ಅವರ ಕುಟುಂಬದ ಸದಸ್ಯರೊಂದಿಗೆ ಆತ್ಮೀಯ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Update: 2025-12-06 04:57 GMT

ಮಾಜಿ ಶಾಸಕ ಗುಮ್ಮಡಿ ನರಸಯ್ಯನವರನ್ನು ಭೇಟಿಯಾದ ಶಿವರಾಜ್‌ಕುಮಾರ್‌ ದಂಪತಿ

Click the Play button to listen to article

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರು ಮೊದಲ ಬಾರಿಗೆ ನಾಯಕ ನಟನಾಗಿ ತೆಲುಗು ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾರೆ.

ಆಂಧ್ರಪ್ರದೇಶದ ಮಾಜಿ ಶಾಸಕ, ಸರಳಜೀವಿ ಗುಮ್ಮಡಿ ನರಸಯ್ಯ ಅವರ ಜೀವನಾಧಾರಿತ ಸಿನಿಮಾದಲ್ಲಿ ಶಿವಣ್ಣ ನಟಿಸುತ್ತಿದ್ದು, ಶನಿವಾರ (ಡಿ.6) ಚಿತ್ರದ ಮುಹೂರ್ತಕ್ಕೂ ಮುನ್ನ ಅವರು ಗುಮ್ಮಡಿ ನರಸಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದರು.

ಶಿವರಾಜ್‌ಕುಮಾರ್ ಅವರು ತಮ್ಮ ಪತ್ನಿ ಗೀತಾ ಅವರೊಂದಿಗೆ ಗುಮ್ಮಡಿ ನರಸಯ್ಯ ಅವರ ಮನೆಗೆ ತೆರಳಿ, ಅವರ ಕುಟುಂಬದ ಸದಸ್ಯರೊಂದಿಗೆ ಆತ್ಮೀಯ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ತಾವು ನಿರ್ವಹಿಸಲಿರುವ ಪಾತ್ರದ ನೈಜ ವ್ಯಕ್ತಿಯನ್ನು ಭೇಟಿಯಾಗಿ, ಅವರ ಜೀವನದ ಬಗ್ಗೆ ಮತ್ತಷ್ಟು ತಿಳಿದುಕೊಳ್ಳುವ ಉದ್ದೇಶದಿಂದ ಈ ಭೇಟಿ ನಡೆದಿದೆ ಎನ್ನಲಾಗಿದೆ.

ಯಾರಿದು ಗುಮ್ಮಡಿ ನರಸಯ್ಯ?

ಆಂಧ್ರಪ್ರದೇಶದಲ್ಲಿ ತಮ್ಮ ಸರಳ ವ್ಯಕ್ತಿತ್ವಕ್ಕೆ ಹೆಸರಾಗಿರುವ ಗುಮ್ಮಡಿ ನರಸಯ್ಯ ಅವರು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ, ಅತ್ಯಂತ ಸಾಮಾನ್ಯ ಜೀವನ ನಡೆಸುವ ಮೂಲಕ ರಾಜಕೀಯದಲ್ಲಿ ಮಾದರಿಯಾಗಿದ್ದಾರೆ. ಅವರ ಈ ಆದರ್ಶ ಬದುಕನ್ನು ತೆರೆಯ ಮೇಲೆ ತರಲು ಸಿದ್ಧತೆ ನಡೆದಿದ್ದು, ನರಸಯ್ಯ ಅವರ ಪಾತ್ರದಲ್ಲಿ ಶಿವಣ್ಣ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಫಸ್ಟ್ ಲುಕ್ ಪೋಸ್ಟರ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ.

 ಸಿನಿಮಾದ ಮುಹೂರ್ತ ಸಮಾರಂಭ ಅದ್ದೂರಿಯಾಗಿ ನಡೆಯಲಿದ್ದು, ಕರುನಾಡ ಚಕ್ರವರ್ತಿಯ ತೆಲುಗು ಸಿನಿಪಯಣ ಅಧಿಕೃತವಾಗಿ ಆರಂಭವಾಗಲಿದೆ.

Tags:    

Similar News