Pushpa 2: The Rule: ಸಿನಿಮಾ ಯಶಸ್ಸಿನ ನಡುವೆಯೂ ಅಲ್ಲು ಅರ್ಜುನ್ ಮೇಲೆ ಕೇಸ್ ದಾಖಲು
ಮೃತರ ಕುಟುಂಬ ನೀಡಿದ ದೂರಿನ ಆಧಾರದ ಮೇಲೆ ಚಿಕ್ಕಡಪ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 105 ಮತ್ತು 118 (1) ರ ಅಡಿಯಲ್ಲಿ ನಟ, ಅವರ ಭದ್ರತಾ ತಂಡ ಮತ್ತು ಚಿತ್ರಮಂದಿರದ ಆಡಳಿತ ಮಂಡಳಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.;
ನಟ ಅಲ್ಲು ಅರ್ಜುನ್ ಅಭಿನಯದ 'ಪುಷ್ಪ 2: ದಿ ರೂಲ್' ಚಿತ್ರದ ಪ್ರೀಮಿಯರ್ ಶೋ ವೇಳೆ ಚಿತ್ರಮಂದಿರದಲ್ಲಿ ಉಂಟಾದ ನೂಕುನುಗ್ಗಲಿನಿಂದ ಮಹಿಳೆಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಮೃತ ಮಹಿಳೆಯನ್ನು 35 ವರ್ಷದ ರೇವತಿ ಎಂದು ಗುರುತಿಸಲಾಗಿದೆ. ಅವರೊಂದಿಗೆ ಅವರ 13 ವರ್ಷದ ಮಗ ಶ್ರೀತೇಜ್ ಅಸ್ವಸ್ಥಗೊಂಡಿದ್ದಾನೆ. ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 48 ಗಂಟೆಗಳ ನಿಗಾದಲ್ಲಿ ಇರಿಸಲಾಗಿದೆ.
ಮೃತರ ಕುಟುಂಬ ನೀಡಿದ ದೂರಿನ ಆಧಾರದ ಮೇಲೆ ಚಿಕ್ಕಡಪ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 105 ಮತ್ತು 118 (1) ರ ಅಡಿಯಲ್ಲಿ ನಟ, ಅವರ ಭದ್ರತಾ ತಂಡ ಮತ್ತು ಚಿತ್ರಮಂದಿರದ ಆಡಳಿತ ಮಂಡಳಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಅಲ್ಲು ಅರ್ಜುನ್, ಅವರ ಭದ್ರತಾ ತಂಡ ಮತ್ತು ಚಿತ್ರಮಂದಿರದ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳು ಪಿಟಿಐಗೆ ತಿಳಿಸಿವೆ.
ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ನಟನನ್ನು ನೋಡಲು ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಇಲ್ಲಿನ ಸಂಧ್ಯಾ ಚಿತ್ರಮಂದಿರದಲ್ಲಿ ಜಮಾಯಿಸಿದ್ದರು ಎನ್ನಲಾಗಿದೆ.
ಚಿತ್ರಮಂದಿರದ ಆಡಳಿತ ಮಂಡಳಿಯಿಂದ ಯಾವುದೇ ವ್ಯವಸ್ಥೆಗಳನ್ನು ಮಾಡಿರಲಿಲ್ಲ. ಮತ್ತು ಚಿತ್ರದ ಇತರ ಸದಸ್ಯರ ಆಗಮನದ ಬಗ್ಗೆ ಯಾವುದೇ ಪೂರ್ವ ಮಾಹಿತಿ ಲಭ್ಯವಿಲ್ಲ ಎಂದು ಅವರು ಹೇಳಿದರು.
ಅರ್ಜುನ್ ತಮ್ಮ ವೈಯಕ್ತಿಕ ಭದ್ರತೆಯೊಂದಿಗೆ ಚಿತ್ರಮಂದಿರ ತಲುಪಿದ ನಂತರ, ಜನರು ಅವರೊಂದಿಗೆ ಚಿತ್ರಮಂದಿರಕ್ಕೆ ಪ್ರವೇಶಿಸಲು ಪ್ರಯತ್ನಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
"ಅವರ ವೈಯಕ್ತಿಕ ಭದ್ರತಾ ತಂಡವು ಸಾರ್ವಜನಿಕರನ್ನು ತಳ್ಳಲು ಪ್ರಾರಂಭಿಸಿತು. ಇದು ಕಾರಣ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿತು " ಎಂದು ಪೊಲೀಸರು ಹೇಳಿದ್ದಾರೆ.