ʼಯುವʼ ಚಿತ್ರದ ʼಅಪ್ಪುಗೆʼ ಹಾಡು ಬಿಡುಗಡೆ‌ ಮಾಡಿದ ಅಪ್ಪು ಪುತ್ರಿ ವಂದಿತಾ

ಪುನೀತ್ ರಾಜಕುಮಾರ್ ಅವರ ದ್ವಿತೀಯ ಪುತ್ರಿ ವಂದಿತ ʼಯುವʼ ಸಿನಿಮಾದ ʼಅಪ್ಪುಗೆʼ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.;

Update: 2024-03-18 08:07 GMT
ಪುನೀತ್ ರಾಜಕುಮಾರ್ ಅವರ ದ್ವಿತೀಯ ಪುತ್ರಿ ವಂದಿತ ಹಾಡನ್ನು ಬಿಡುಗಡೆ ಮಾಡಿದರು.
Click the Play button to listen to article

ಸಂತೋಷ್ ಆನಂದರಾಮ್ ನಿರ್ದೇಶನದ ಹಾಗೂ ಯುವ ರಾಜಕುಮಾರ್ ನಾಯಕನಾಗಿ ನಟಿಸಿರುವ ʼಯುವʼ ಸಿನಿಮಾದ ʼಅಪ್ಪುಗೆʼ ಹಾಡು ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

ಪುನೀತ್ ರಾಜಕುಮಾರ್ ಅವರ ದ್ವಿತೀಯ ಪುತ್ರಿ ವಂದಿತಾ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ʼಯವʼ ಕೌಟುಂಬಿಕ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಸಿನಿಮಾ. ತಂದೆ - ಮಗನ ಬಾಂಧವ್ಯದ ಚಿತ್ರವೂ ಹೌದು. ಒಂದು ಕುಟುಂಬಕ್ಕಾಗಿ ಅಪ್ಪ ಏನೆಲ್ಲಾ ಮಾಡುತ್ತಾನೆ. ಆದರೆ ಆತ ಯಾರಿಂದಲೂ ಏನನ್ನು ನಿರೀಕ್ಷಿಸುವುದಿಲ್ಲ. ಕುಟುಂಬದಲ್ಲಿ ಅಪ್ಪನ ಪಾತ್ರ ಬಹಳ ದೊಡ್ಡದು. ಅಂತಹ ಅಪ್ಪನ ಗುಣಗಳನ್ನು ವರ್ಣಿಸುವ ನಮ್ಮ ಚಿತ್ರದ ʼಅಪ್ಪುಗೆʼ ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ನಾನೇ ಬರೆದಿದ್ದೇನೆ. ವಿಜಯ್ ಪ್ರಕಾಶ್ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಅಪ್ಪನ ಕುರಿತಾದ ಹಾಡಾಗಿರುವುದರಿಂದ ಈ ಹಾಡನ್ನು ವಂದಿತಾ ಅವರಿಂದ ಬಿಡುಗಡೆ ಮಾಡಿಸೋಣ ಅಂದುಕೊಂಡೆವು‌. ಇನ್ನು, ಮಾರ್ಚ್ 21 ರಂದು ʼಯುವʼ ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಮಾರ್ಚ್ 23 ರಂದು ಹೊಸಪೇಟೆಯಲ್ಲಿ ಪ್ರೀ ರಿಲೀಸ್ ಇವೆಂಟ್ ನಡೆಯಲಿದೆ. ಚಿತ್ರ ಮಾರ್ಚ್ 29ಕ್ಕೆ ತೆರೆಗೆ ಬರಲಿದೆ ಎಂದು ನಿರ್ದೇಶಕ ಸಂತೋಷ್ ಆನಂದರಾಮ್ ತಿಳಿಸಿದರು.

"ಈ ಚಿತ್ರದ ಕಥೆಗೂ ಹಾಗೂ ನನ್ನ ಜೀವನದ ಕಥೆಗೂ ಸುಮಾರು ವಿಷಯಗಳು ಹೋಲುತ್ತದೆ. ತಂದೆ - ಮಗನ ಸಂಬಂಧ ಬೇರೆ ರೀತಿಯದೆ ಸಂಬಂಧ. ತಂದೆಯ ಜವಾಬ್ದಾರಿ ನಮಗೆ ಅರ್ಥವಾಗುವುದೇ ಇಲ್ಲ. ನಾವು ದುಡಿಯುವುದಕ್ಕೆ ಶುರು ಮಾಡಿದಾಗ ನಮಗೆ ತಂದೆಯ ಜವಾಬ್ದಾರಿ ತಿಳಿಯುತ್ತಾ ಹೋಗುತ್ತದೆ. ಈ ಚಿತ್ರದಲ್ಲಿ ಅಚ್ಯುತಕುಮಾರ್ ಅವರು ನನ್ನ ತಂದೆ ಪಾತ್ರ ಮಾಡಿದ್ದಾರೆ‌. ಅವರೊಂದಿಗೆ ಕೆಲವು ಸನ್ನಿವೇಶಗಳಲ್ಲಿ ನಟಿಸಬೇಕಾದರೆ ನನಗೆ ನಮ್ಮ ಅಪ್ಪ ಕಣ್ಣ ಮುಂದೆ ಬರುತ್ತಿದ್ದರು. ಅಂತಹ ಅಪ್ಪ - ಮಗನ ನಡುವಿನ ಸಂಬಂಧವನ್ನು ಬಣ್ಣಿಸುವ ಈ ʼಅಪ್ಪುಗೆʼ ಹಾಡು ಎಲ್ಲರ ಮನಸ್ಸಿಗೂ ಹತ್ತಿರವಾಗುತ್ತದೆ" ಎಂದು ಚಿತ್ರದ ನಾಯಕ ಯುವ ರಾಜಕುಮಾರ್ ತಿಳಿಸಿದರು.

ಹೊಂಬಾಳೆ ಫಿಲಂಸ್ ಲಾಂಛನಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಛಾಯಾಗ್ರಾಹಕ ಶ್ರೀಶ ಕೂದುವಳ್ಳಿ, ಸಂಕಲನಕಾರ ಆಶಿಕ್ ಕುಸುಗೊಳ್ಳಿ ಹಾಗೂ ಕಾರ್ಯಕಾರಿ ನಿರ್ಮಾಪಕ ಯೋಗಿ ಜಿ ರಾಜ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಹಾಡು ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Tags:    

Similar News