ಹಸೆಮಣೆ ಏರಲಿದ್ದಾರಾ ರಶ್ಮಿಕಾ-ವಿಜಯ್ ದೇವರಕೊಂಡ? ನಿಶ್ಚಿತಾರ್ಥದ ಸುದ್ದಿ ವೈರಲ್

'ಗೀತಾ ಗೋವಿಂದಂ' ಮತ್ತು 'ಡಿಯರ್ ಕಾಮ್ರೇಡ್' ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿ ತೆರೆಯ ಮೇಲೆ ಮೋಡಿ ಮಾಡಿದ್ದ ಈ ಜೋಡಿ, ನಿಜ ಜೀವನದಲ್ಲಿಯೂ ಒಂದಾಗಲಿದೆ ಎಂಬ ಮಾತುಗಳು ಬಹಳ ದಿನಗಳಿಂದ ಕೇಳಿಬರುತ್ತಿವೆ.

Update: 2025-10-04 04:32 GMT

ರಶ್ಮಿಕಾ-ವಿಜಯ್ ದೇವರಕೊಂಡ

Click the Play button to listen to article

ದಕ್ಷಿಣ ಭಾರತದ ಖ್ಯಾತ ತಾರೆಯರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಸುದ್ದಿ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದಾರೆ ಎನ್ನಲಾಗುತ್ತಿರುವ ಈ ಜೋಡಿ, ಇದೀಗ ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, 2026ರ ಫೆಬ್ರವರಿಯಲ್ಲಿ ವಿವಾಹವಾಗಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ. ಆದರೆ, ಈ ಬಗ್ಗೆ ರಶ್ಮಿಕಾ ಅಥವಾ ವಿಜಯ್ ದೇವರಕೊಂಡ ಅವರಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

'ಗೀತಾ ಗೋವಿಂದಂ' ಮತ್ತು 'ಡಿಯರ್ ಕಾಮ್ರೇಡ್' ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿ ತೆರೆಯ ಮೇಲೆ ಮೋಡಿ ಮಾಡಿದ್ದ ಈ ಜೋಡಿ, ನಿಜ ಜೀವನದಲ್ಲಿಯೂ ಒಂದಾಗಲಿದೆ ಎಂಬ ಮಾತುಗಳು ಬಹಳ ದಿನಗಳಿಂದ ಕೇಳಿಬರುತ್ತಿವೆ. ಆಗಾಗ ವಿದೇಶ ಪ್ರವಾಸ, ಪಾರ್ಟಿಗಳಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ತಮ್ಮ ಸಂಬಂಧದ ಬಗ್ಗೆ ಕುತೂಹಲ ಮೂಡಿಸುತ್ತಲೇ ಬಂದಿದ್ದರು. ಇದೀಗ ಈ ಜೋಡಿ ತಮ್ಮ ಸಂಬಂಧವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.

ರಕ್ಷಿತ್ ಶೆಟ್ಟಿ ಜೊತೆಗಿನ ನಿಶ್ಚಿತಾರ್ಥ

ರಶ್ಮಿಕಾ ಮಂದಣ್ಣ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ "ಕಿರಿಕ್ ಪಾರ್ಟಿ" ಸಿನಿಮಾದ ನಾಯಕ ನಟ ರಕ್ಷಿತ್ ಶೆಟ್ಟಿ ಅವರೊಂದಿಗೆ ಪ್ರೀತಿಯಲ್ಲಿದ್ದರು. 2017ರಲ್ಲಿ ಕೊಡಗಿನ ವಿರಾಜಪೇಟೆಯಲ್ಲಿ ಅದ್ದೂರಿಯಾಗಿ ಇವರಿಬ್ಬರ ನಿಶ್ಚಿತಾರ್ಥ ನೆರವೇರಿತ್ತು. ಆದರೆ, ಕೆಲವೇ ತಿಂಗಳುಗಳಲ್ಲಿ ಇಬ್ಬರ ನಡುವೆ ಹೊಂದಾಣಿಕೆ ಸಮಸ್ಯೆಗಳು ಎದುರಾದ ಕಾರಣ, 2018ರ ಸೆಪ್ಟೆಂಬರ್‌ನಲ್ಲಿ ಪರಸ್ಪರ ಒಪ್ಪಿಗೆಯ ಮೇರೆಗೆ ನಿಶ್ಚಿತಾರ್ಥವನ್ನು ಮುರಿದುಕೊಂಡರು. ಈ ಘಟನೆಯ ನಂತರ ರಶ್ಮಿಕಾ ಅವರು ಕನ್ನಡ ಚಿತ್ರರಂಗದಿಂದ ಅಂತರ ಕಾಯ್ದುಕೊಂಡು, ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

Tags:    

Similar News