ಅದ್ಧೂರಿಯಾಗಿ ನೆರವೇರಿದ ಅರ್ಜುನ್‌ ಸರ್ಜಾ ಪುತ್ರಿ ವಿವಾಹ

ನಟ ಅರ್ಜುನ್‌ ಸರ್ಜಾ ಅವರ ಪುತ್ರಿ ಐಶ್ವರ್ಯಾ ನಟ ಉಮಾಪತಿ ರಾಮಯ್ಯ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

Update: 2024-06-12 11:54 GMT
ನಟ ಅರ್ಜುನ್‌ ಸರ್ಜಾ ಅವರ ಪುತ್ರಿ ಐಶ್ವರ್ಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Click the Play button to listen to article

ನಟ ಅರ್ಜುನ್‌ ಸರ್ಜಾ ಅವರ ಪುತ್ರಿ ಐಶ್ವರ್ಯಾ ನಟ ಉಮಾಪತಿ ರಾಮಯ್ಯ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಜೂನ್ 10ರಂದು ಈ ಜೋಡಿ ಚೆನೈನ ಹನುಮಾನ್‌ ದೇವಸ್ಥಾನಲ್ಲಿ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಅರ್ಜುನ್ ಸರ್ಜಾ ಮಗಳು ಐಶ್ವರ್ಯಾ ಅರ್ಜುನ್, ತಮಿಳಿನ ನಟ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಅವರನ್ನು ಮದುವೆಯಾಗಿದ್ದಾರೆ.

ಐಶ್ವರ್ಯಾ ಮತ್ತು ಉಮಾಪತಿ ಜೀ ತಮಿಳು ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಸರ್ವೈವರ್' ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಅಲ್ಲಿಂದ ಇಬ್ಬರು ಸ್ನೇಹಿತರಾಗಿದ್ದರು. ಇಬ್ಬರ ಸ್ನೇಹ ಪ್ರೀತಿಗೆ ತಿರುಗಿತ್ತು. ಪ್ರೀತಿಯ ವಿಚಾರವನ್ನು ಹಿರಿಯರ ಗಮನಕ್ಕೆ ತಂದಾಗ ಇಬ್ಬರ ಮನೆಯವರು ಮದುವೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಕಳೆದ ವರ್ಷ ಅಕ್ಟೋಬರ್​ ನಲ್ಲಿ ಅವರ ನಿಶ್ಚಿತಾರ್ಥ ಸಮಾರಂಭ ನಡೆದಿತ್ತು.

ಸೋಮವಾರ (ಜೂ.10) ಚೆನ್ನೈನಲ್ಲಿ ನಟ ಅರ್ಜುನ್ ನಿರ್ಮಿಸಿರುವ ಆಂಜನೇಯರ ದೇವಸ್ಥಾನದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಚಿತ್ರರಂಗದರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.

Full View

ಬೆರಳೆಣಿಕೆ ಸಿನಿಮಾಗಳಲ್ಲಿ ನಟಿಸಿ ಮಿಂಚಿದ ಅರ್ಜುನ್‌ ಸರ್ಜಾ ಪುತ್ರಿ ಐಶ್ವರ್ಯ ಸಿನಿಮಾಗಳಿಂದ ಅಷ್ಟಾಗಿ ಗುರುತಿಸಿಕೊಳ್ಳಲಿಲ್ಲ. ಹೀಗಾಗಿ ನಟಿ ಚಿತ್ರರಂಗದಿಂದ ಕೊಂಚ ದೂರ ಉಳಿದಿದ್ದರು.

Tags:    

Similar News