ಹತ್ತು ವರ್ಷಗಳ ನಂತರ ಮರುಬಿಡುಗಡೆಯಾಗಲಿದೆ ʼಬಹದ್ದೂರ್ʼ!
ಧ್ರುವ ಸರ್ಜಾ ಹಾಗೂ ರಾಧಿಕಾ ಪಂಡಿತ್ ನಾಯಕಿಯಾಗಿ ನಟಿಸಿದ್ದ ʼಬಹದ್ದೂರ್ʼ ಸಿನಿಮಾ ಹತ್ತು ವರ್ಷಗಳ ನಂತರ ಜೂ.21ರಂದು ಈ ಚಿತ್ರ ಮರು ಬಿಡುಗಡೆಯಾಗುತ್ತಿದೆ.;
By : The Federal
Update: 2024-06-16 13:01 GMT
ಧ್ರುವ ಸರ್ಜಾ ಹಾಗೂ ರಾಧಿಕಾ ಪಂಡಿತ್ ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ ʼಬಹದ್ದೂರ್ʼ ಚಿತ್ರ 2014 ರಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿತ್ತು. ಈಗ ಹತ್ತು ವರ್ಷಗಳ ನಂತರ ಜೂನ್ 21 ರಂದು ಈ ಚಿತ್ರ ಮರು ಬಿಡುಗಡೆಯಾಗುತ್ತಿದೆ.
ಆರ್.ಎಸ್. ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್. ಶ್ರೀನಿವಾಸ್ ಹಾಗೂ ಕೆ.ಪಿ. ಶ್ರೀಕಾಂತ್ ನಿರ್ಮಿಸಿರುವ, ಚೇತನ್ ಕುಮಾರ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದರು.
ಗೋಕುಲ್ ಫಿಲಂಸ್ ಅವರು ಅದ್ದೂರಿಯಾಗಿ ಅನೇಕ ಚಿತ್ರಮಂದಿರಗಳಲ್ಲಿ ಚಿತ್ರವನ್ನು ರೀ ರಿಲೀಸ್ ಮಾಡುತ್ತಿದ್ದಾರೆ. ಈ ಚಿತ್ರ ಪ್ರಸಾರವಾದಾಗಲೆಲ್ಲ ಉತ್ತಮ ಟಿ.ಆರ್.ಪಿ ಬರುತ್ತಿರುವುದು ವಿಶೇಷ. ಧ್ರುವ ಸರ್ಜಾ ಹಾಗೂ ರಾಧಿಕಾ ಪಂಡಿತ್ ಅವರ ಅದ್ಭುತ ಅಭಿನಯ ಈ ಚಿತ್ರದ ಹೈಲೈಟ್. ಇದು ಧ್ರುವ ಸರ್ಜಾ ಅಭಿನಯದ ಎರಡನೇ ಚಿತ್ರ. ಹತ್ತು ವರ್ಷಗಳ ಮೇಲೆ ಈ ಚಿತ್ರ ಮರು ಬಿಡುಗಡೆಯಾಗುತ್ತಿರುವುದು ಸಂತೋಷವಾಗಿದೆ ಎನ್ನುತ್ತಾರೆ ನಿರ್ದೇಶಕ ಚೇತನ್ ಕುಮಾರ್.