ನಂಜುಂಡೇಶ್ವರನಿಗೆ ಪೂಜೆ ಸಲ್ಲಿಸಿದ ಬಾಲಿವುಡ್‌ ಬೆಡಗಿ ಶಿಲ್ಪಾ ಶೆಟ್ಟಿ

ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿಯವರು ಮಂಗಳವಾರ ಸಂಜೆ ನಂಜನಗೂಡಿಗೆ ಭೇಟಿ ನೀಡಿ, ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.;

Update: 2024-05-29 10:24 GMT
ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ
Click the Play button to listen to article

ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿಯವರು ಮಂಗಳವಾರ ( ಮೇ 29) ಸಂಜೆ ನಂಜನಗೂಡಿಗೆ ಭೇಟಿ ನೀಡಿ, ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ದೇವರ ದರ್ಶನ ಪಡೆದ ನಂತರ ದೇವಾಲಯದ ವಸಂತ ಮಂಟಪದಲ್ಲಿ 5 ನಿಮಿಷಗಳ ಕಾಲ ಕುಳಿತು ಧ್ಯಾನ ಮಾಡಿದರು. ಬಳಿಕ, ಶಿಲ್ಪಾಶೆಟ್ಟಿಯವರಿಗೆ ದೇವಾಲಯದ ಅರ್ಚಕರು ದೇವರ ಶೇಷ ವಸ್ತ್ರ ಹಾಗೂ ಪ್ರಸಾದ ನೀಡಿ, ಆಶೀರ್ವದಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿಲ್ಪಾ ಶೆಟ್ಟಿ ಅವರು, ಮೈಸೂರಿನ ಇಲವಾಲದಲ್ಲಿ ಹಿಂದಿ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಸಲುವಾಗಿ ಬಂದಿದ್ದೆ. ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದೇವಾಲಯದ ಬಗ್ಗೆ ಬಹಳವಾಗಿ ಕೇಳಿದ್ದೆ. ಇಂದು ದೇವರ ದರ್ಶನ ಪಡೆಯುವ ಸೌಭಾಗ್ಯ ದೊರೆಯಿತು ಎಂದು ಹರ್ಷ ವ್ಯಕ್ತಪಡಿಸಿದರು.

ಶಿಲ್ಪಾ ಶೆಟ್ಟಿ ಅವರು ಇತ್ತೀಚೆಗೆ ಮಂಗಳೂರಿನ ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದಾದ ಬಳಿಕ ದೈವಕೋಲದಲ್ಲಿ ಮಕ್ಕಳೊಂದಿಗೆ ಪಾಲ್ಗೊಂಡಿದ್ದರು. ಸದ್ಯ ಮೈಸೂರಿನಲ್ಲಿ ‘ಕೆಡಿ’ ಶೂಟ್​ ನಡೆಯುತ್ತಿದ್ದು, ಇದರ ಚಿತ್ರೀಕರಣದಲ್ಲಿ ಅವರು ಭಾಗಿ ಆಗಿದ್ದಾರೆ. ಈ ವೇಳೆ ಅವರು ಸಮಯ ಮಾಡಿಕೊಂಡು ನಂಜುಡೇಶ್ವರಕ್ಕೆ ತೆರಳಿದ್ದಾರೆ.

Tags:    

Similar News